ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ವರ್ಗಾವಣೆ ತಾತ್ಕಾಲಿಕ ಮುಂದೂಡಿಕೆ

Last Updated 15 ಸೆಪ್ಟೆಂಬರ್ 2021, 19:28 IST
ಅಕ್ಷರ ಗಾತ್ರ

ಬೆಂಗಳೂರು: 2020–2021ನೇ ಸಾಲಿನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

‘ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಸೆ. 7ರಂದು ತಡೆಯಾಜ್ಞೆ ನೀಡಿದೆ. ಹೀಗಾಗಿ, ಈ ಕ್ರಮ ತೆಗೆದುಕೊಳ್ಳಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ತತ್ಸಮಾನ ವೃಂದದ ಶಿಕ್ಷಕರ ವರ್ಗಾವಣೆಗೆ ಜೂನ್‌ 30ರಂದು ಅಧಿಸೂಚನೆ ಹೊರಡಿಸಲಾಗಿತ್ತು. ‌ವರ್ಗಾವಣೆ ಬಯಸಿ 75 ಸಾವಿರಕ್ಕೂ ಹೆಚ್ಚು ಶಿಕ್ಷಕರು ಅರ್ಜಿ ಸಲ್ಲಿಸಿದ್ದಾರೆ.

ಶಿಕ್ಷಕರ ವರ್ಗಾವಣೆ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಿ 2019–20ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾದವರಿಗೆ ಕೌನ್ಸೆಲಿಂಗ್‌ ವೇಳೆ ವಿಶೇಷ ಆದ್ಯತೆ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ‌ಕೆಎಟಿ ಮೆಟ್ಟಿಲೇರಿದ್ದ 2016–17ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾಗಿರುವ ಶಿಕ್ಷಕರು, ‘ತಮಗೂ ವಿಶೇಷ ಆದ್ಯತೆ ನೀಡಬೇಕು’ ಎಂದು ‌ಮನವಿ ಮಾಡಿದ್ದರು. ‌ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿರುವ ನ್ಯಾಯಮಂಡಳಿ, ವರ್ಗಾವಣೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT