ಬುಧವಾರ, ಜನವರಿ 20, 2021
27 °C

ತಾಂತ್ರಿಕ ಮೌಲ್ಯಮಾಪನ ಸಮಿತಿಗೆ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್‌) ಮತ್ತು ರಾಜ್ಯ ವಿಪತ್ತು ಪರಿಹಾರ ನಿಧಿಯ(ಎಸ್‌ಡಿಆರ್‌ಎಫ್‌) ಅನುದಾನ ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ರಾಜ್ಯ ಸರ್ಕಾರವು ತಾಂತ್ರಿಕ ಮೌಲ್ಯಮಾಪನ ಸಮಿತಿ ಮತ್ತು ಯೋಜನಾ ಮೌಲ್ಯಮಾಪನ ಸಮಿತಿಗಳನ್ನು ರಚಿಸಿದೆ.

ತಾಂತ್ರಿಕ ಮೌಲ್ಯಮಾಪನ ಸಮಿತಿಗೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಈ ಸಮಿತಿಗೆ ಡಾ.ಜಿ.ಶ್ರೀನಿವಾಸರಾವ್‌– ಉಪನಿರ್ದೇಶಕರು (ವಿಪತ್ತು ನಿರ್ವಹಣೆ) ಇಸ್ರೊ, ಡಾ.ಪಿ.ಪ್ರದೀಪ್‌ ಮುಜುಂದಾರ್‌– ಭಾರತೀಯ ವಿಜ್ಞಾನ ಸಂಸ್ಥೆ, ಡಾ.ವೈ.ಎಸ್‌.ಷಡಕ್ಷರಿ– ನಿರ್ದೇಶಕರು, (ರೀಸರ್ಚ್‌) ಯುಎಎಸ್‌ಬಿ, ಡಾ.ಜಯಚಂದ್ರ– ಕೆಎಸ್‌ಆರ್‌ಎಸಿ, ಐಸೆಕ್‌ನ ನಿರ್ದೇಶಕರು ಮತ್ತು ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ವಿಭಾಗದ ಉಪಕಾರ್ಯದರ್ಶಿ ಪದನಿಮಿತ್ತ ಸದಸ್ಯರಾಗಿರುತ್ತಾರೆ.

ಯೋಜನಾ ಮೌಲ್ಯ ಮಾಪನ ಸಮಿತಿಗೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ/ ಅಭಿವೃದ್ಧಿ ಆಯುಕ್ತರು ಅಧ್ಯಕ್ಷರಾಗಿರುತ್ತಾರೆ. ಸದಸ್ಯರನ್ನಾಗಿ ಹಣಕಾಸು ಇಲಾಖೆ, ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ ಮತ್ತು ಕೃಷಿ ಇಲಾಖೆಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳು ಹಾಗೂ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಆಯುಕ್ತರನ್ನು ನೇಮಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು