ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಂತ್ರಿಕ ಶಿಕ್ಷಣ ಇಲಾಖೆಯ 372 ಬೋಧಕರ ವರ್ಗಾವಣೆ

Last Updated 31 ಜುಲೈ 2021, 19:31 IST
ಅಕ್ಷರ ಗಾತ್ರ

ಬೆಂಗಳೂರು: ‘ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ತಾಂತ್ರಿಕ ಶಿಕ್ಷಣ ಇಲಾಖೆಯ 372 ಬೋಧಕರ ವರ್ಗಾವಣೆಗೆ ನಡೆಸಲಾದ ಕೌನ್ಸೆಲಿಂಗ್ ಮುಗಿದಿದ್ದು, ಈ ಬೋಧಕರಿಗೆ ಸ್ಥಳ ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ’ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ. ಪ್ರದೀಪ್ ತಿಳಿಸಿದ್ದಾರೆ.

'ಜನಸ್ನೇಹಿ ಮತ್ತು ಪಾರದರ್ಶಕವಾಗಿ ವರ್ಗಾವಣೆ ಪ್ರಕ್ರಿಯೆ ನಡೆಸಲು ತಾಂತ್ರಿಕ ವ್ಯವಸ್ಥೆ ಬಳಸಿಕೊಂಡು ಕೌನ್ಸೆಲಿಂಗ್ ನಡೆಸಲಾಗಿದೆ. ಈ ಮೊದಲೇ ರೂಪಿಸಿದ್ದ ವರ್ಗಾವಣೆ ನೀತಿಯ ಪ್ರಕಾರ ಜುಲೈ 27ರಿಂದ 30ರವರೆಗೂ ಕೌನ್ಸೆಲಿಂಗ್ ನಡೆಸಲಾಗಿದೆ’ ಎಂದಿದ್ದಾರೆ.

‘ಕೌನ್ಸೆಲಿಂಗ್ ಪೂರ್ವದಲ್ಲಿ ಕಡ್ಡಾಯ ವರ್ಗಾವಣೆಗೆ ಅರ್ಹರಿದ್ದ ಶೇ 6 ಬೋಧಕರ ಪಟ್ಟಿ ಪ್ರಕಟಿಸಲಾಗಿತ್ತು. ಜತೆಗೆ, ಕೋರಿಕೆ ವರ್ಗಾವಣೆ ಕೇಳಿರುವ ಪತಿ-ಪತ್ನಿಯರ ಪ್ರಕರಣಗಳ ಶೇ 3, ಅಂಗವಿಕಲರ ಶೇ 1, ವಿಧವೆ ಅಥವಾ ಏಕಪೋಷಕ ಪ್ರಕರಣಗಳ ಶೇ 1, ಆರೋಗ್ಯ ಸೇರಿದಂತೆ ಗಂಭೀರ ಪ್ರಕರಣಗಳ ಶೇ 1 ಸೇರಿ ಎಲ್ಲ ವಲಯಗಳಲ್ಲಿ ಲಭ್ಯವಿರುವ ಖಾಲಿ ಹುದ್ದೆಗಳ ಪಟ್ಟಿ ಪ್ರಕಟಿಸಿ ಕೌನ್ಸೆಲಿಂಗ್ ನಡೆಸಲಾಗಿದೆ’ ಎಂದು ಪ್ರದೀಪ್ ಹೇಳಿದ್ದಾರೆ.

‘ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳ 307, ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಗಳ 5 ಹಾಗೂ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ 60 ಬೋಧಕರು ಕೌನ್ಸೆಲಿಂಗ್‌ಗೆ ಹಾಜರಾಗಿದ್ದು, ಎಲ್ಲರೂ ಸ್ಥಳ ಆಯ್ಕೆ ಮಾಡಿಕೊಂಡಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

ನಿಯೋಜನೆ ರದ್ದು: ಸರ್ಕಾರಿ ಪಾಲಿಟೆಕ್ನಿಕ್, ಕಿರಿಯ ತಾಂತ್ರಿಕ ಶಾಲೆ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ನಿಯೋಜನೆ ಮೇರೆಗೆ ಕೆಲಸ ಮಾಡುತ್ತಿದ್ದ 317 ಬೋಧಕರ ನಿಯೋಜನೆ ಆದೇಶವನ್ನು ಹಿಂಪಡೆಯಲಾಗಿದೆ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT