ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೇಜಸ್ವಿ ಸೂರ್ಯ ಕ್ಷಮೆಯಾಚನೆ ವಿಷಯ ಚರ್ಚೆ

ವಾರ್ ರೂಮ್ಗೆ ಭೇಟಿ ನೀಡಿದ ಸಂಸದ
Last Updated 7 ಮೇ 2021, 20:30 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ದಕ್ಷಿಣ ವಲಯದ ಕೋವಿಡ್‌ ವಾರ್‌ ರೂಮ್‌ಗೆ ಗುರುವಾರ ಸಂಜೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಮುಸ್ಲಿಂ ಸಿಬ್ಬಂದಿಯ ಕ್ಷಮೆ ಕೋರಿದ್ದಾರೋ, ಇಲ್ಲವೋ ಎಂಬ ವಿಷಯ ಸಾಮಾಜಿಕ ಮಾಧ್ಯಮದಲ್ಲಿ ಶುಕ್ರವಾರ ಚರ್ಚೆಗೆ ಕಾರಣವಾಯಿತು.

ವಾರ್‌ ರೂಮ್‌ ಸಿಬ್ಬಂದಿ ಕ್ಷಮೆಯಾಚಿಸಿದರು ಎಂದು ಹಲವು ಮಾಧ್ಯಮಗಳು ವರದಿ ಮಾಡಿದರೆ, ಈ ರೀತಿ ಯಾರದೇ ಕ್ಷಮೆ ಕೇಳಿಲ್ಲ ಎಂದು ತೇಜಸ್ವಿ ಸೂರ್ಯ ಟ್ವಿಟರ್‌ನಲ್ಲಿ ಸ್ಪಷ್ಟಪಡಿಸಿದರು.

‘ಯಾವುದೇ ಸುದ್ದಿ ಸಿಗದಿದ್ದಾಗ ಕೆಲ ಮಾಧ್ಯಮಗಳು ಇಂತಹ ಸುಳ್ಳು ಸುದ್ದಿ ಸೃಷ್ಟಿಸುತ್ತವೆ’ ಎಂದು ತೇಜಸ್ವಿಸೂರ್ಯ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಯಾಗಿ, ‘ನೀವು ಕ್ಷಮೆ ಕೇಳಿದ್ದಕ್ಕೆ ನಮ್ಮ ಬಳಿ ಸಾಕ್ಷಿ ಇದೆ’ ಎಂದು ‘ನ್ಯೂಸ್ ಮಿನಿಟ್‌’ ಸುದ್ದಿ ಸಂಸ್ಥೆಯ ಧನ್ಯಾ ರಾಜೇಂದ್ರನ್‌ ಟ್ವೀಟ್‌ ಮಾಡಿದರು.

‘ಸಂಸದ ತೇಜಸ್ವಿ ಸೂರ್ಯ ಗುರುವಾರ ವಾರ್‌ ರೂಮ್‌ಗೆ ಭೇಟಿ ನೀಡಿದ್ದರು. ಯಾರೂ ಈ ವಿಷಯವನ್ನು ವೈಯಕ್ತಿಕವಾಗಿ ತೆಗೆದುಕೊಳ್ಳಬೇಡಿ. ಧೈರ್ಯದಿಂದ ಇರಿ ಎಂದು ವಿಶ್ವಾಸ ತುಂಬಿದ್ದಾಗಿ ಸಿಬ್ಬಂದಿ ನನಗೆ ತಿಳಿಸಿದರು’ ಎಂದು ವಾರ್‌ ರೂಮ್‌ಗೆ ಗುತ್ತಿಗೆ ಸಿಬ್ಬಂದಿ ಪೂರೈಸಿರುವ ಕ್ರಿಸ್ಟಲ್‌ ಏಜೆನ್ಸಿಯ ಯೋಜನಾ ವ್ಯವಸ್ಥಾಪಕ ಶಿವು ನಾಯ್ಕ್‌ ‘ಪ್ರಜಾವಾಣಿ’ಗೆ ತಿಳಿಸಿದರು.

‘ಪ್ರಕರಣದ ನಂತರ ಬಹಳಷ್ಟು ಸಿಬ್ಬಂದಿ ಕೆಲಸಕ್ಕೆ ಬರುತ್ತಿರಲಿಲ್ಲ. ಈ ಸಂದರ್ಭದಲ್ಲಿ ರಜೆ ಹಾಕುವುದು ಬೇಡ. ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಕರ್ತವ್ಯಕ್ಕೆ ಹಾಜರಾಗಿ ಎಂದು ಸಂಸದರು ಹೇಳಿದರು’ ಎಂಬುದಾಗಿ ಅವರು ಹೇಳಿದರು.

ಈ ಸಂಬಂಧ ಪ್ರತಿಕ್ರಿಯೆ ಪಡೆಯಲು ತೇಜಸ್ವಿ ಸೂರ್ಯ ಅವರಿಗೆ ಹಲವು ಬಾರಿ ಕರೆ ಮಾಡಲಾಯಿತು. ಅವರು ಸ್ವೀಕರಿಸಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT