ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ವಿರುದ್ಧವೇ ತೇಜಸ್ವಿ ಅವರಿಂದ ಭ್ರಷ್ಟಾಚಾರ, ಪರೋಕ್ಷ ಹತ್ಯೆ ಆರೋಪ: ಕಾಂಗ್ರೆಸ್

Last Updated 4 ಮೇ 2021, 16:49 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕಿತರ ಹೆಸರಿನಲ್ಲಿ ಹಾಸಿಗೆ ಬ್ಲಾಕ್ ಮಾಡಿಸಿ ದುಬಾರಿ ಬೆಲೆಗೆ ಬೇರೊಬ್ಬರಿಗೆ ಮಾರಾಟ ಮಾಡುತ್ತಿದ್ದ ದಂಧೆಯನ್ನು ಸಂಸದ ತೇಜಸ್ವಿ ಸೂರ್ಯ ಹಾಗೂ ಸರ್ಕಾರದ ಶಾಸಕರು ಬಯಲು ಮಾಡಿದ್ದು, ತಪ್ಪಿತ್ತಸ್ಥರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಸಂಸದ ತೇಜಸ್ವಿ ಅವರು ಸಿಎಂ ಯಡಿಯೂರಪ್ಪ ಹಾಗೂ ಸಚಿವರ ವಿರುದ್ಧ ಭ್ರಷ್ಟಾಚಾರ ಹಾಗೂ ಪರೋಕ್ಷ ಹತ್ಯೆ ಆರೋಪ ಮಾಡಿದ್ದಾರೆ. ಎಂತಹ ನಾಟಕ ಎಂದು ಹೇಳಿದೆ.

ರಾಜ್ಯದಲ್ಲೂ ಕೇಂದ್ರದಲ್ಲೂ ಬಿಬಿಎಂಪಿಯಲ್ಲೂ ಬಹುತೇಕ ಬೆಂಗಳೂರು ಎಂಪಿಗಳೂ ಎಲ್ಲರೂ ಬಿಜೆಪಿಯವರೇ! ಒಬ್ಬರಲ್ಲ ಎಂದು ಮೂರು ಡಿಸಿಎಂಗಳು. ಅಧಿಕಾರವೆಲ್ಲ ತಮ್ಮ ಕೈಲಿದ್ದು ಸಹ ಬಿಜೆಪಿಯ ಎಂಪಿಗಳು, ಶಾಸಕರು ಪ್ರೆಸ್ ಮೀಟ್ ಮಾಡಿ ತಮ್ಮದೇ ಸರ್ಕಾರದ ವೈಫಲ್ಯತೆ, ಭ್ರಷ್ಟಾಚಾರವನ್ನು ಹೇಳುತ್ತಿದ್ದಾರೆ ಎಂದರೆ ಇದು ತೀರ ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದೆ.

ಇಂದು ನಡೆದ ಸಂಸದ- ಶಾಸಕರ ಪತ್ರಿಕಾಗೋಷ್ಠಿ ಅಧಿಕಾರಿಗಳ ಮೇಲೆ ಆರೋಪ ಹೊರಿಸಿ ಹೊಣೆಗಾರಿಕೆಯಿಂದ ಜಾರಿಕೊಳ್ಳುವ ಯತ್ನ ಹಾಗೂ ಬಿಜೆಪಿ ಒಳಜಗಳದ ಭಾಗವಷ್ಟೇ. ಬೆಡ್‌ಗಳ ಅವ್ಯವಹಾರ ನಡೆಯುತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದೇಕೆ? ಪತ್ರಿಕಾಗೋಷ್ಠಿ ಬದಲು ಲೋಪ ಸರಿಪಡಿಸುವ ಪ್ರಯತ್ನ ಮಾಡಿಲ್ಲ ಏಕೆ? ಇಂತಹ ದುರಿತ ಕಾಲದಲ್ಲೂ ಗಂಭೀರ್ಯತೆ ಇಲ್ಲವೇಕೆ? ಎಂದು ಪ್ರಶ್ನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT