ಶುಕ್ರವಾರ, ಡಿಸೆಂಬರ್ 9, 2022
21 °C

ರೇಷ್ಮೆ ಅಭಿವೃದ್ಧಿ ಆಯುಕ್ತರಾಗಿ ರಾಜೇಶ್‌ ಗೌಡ: 10 ಐಎಎಸ್ ಅಧಿಕಾರಿಗಳು ವರ್ಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬದಲಿ ನಿವೇಶನ ಹಂಚಿಕೆಯಲ್ಲಿ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಬಿಡಿಎ ಆಯುಕ್ತರ ಹುದ್ದೆಯಿಂದ ವರ್ಗಾವಣೆಯಾಗಿದ್ದ ಐಎಎಸ್‌ ಅಧಿಕಾರಿ ಎಂ.ಬಿ. ರಾಜೇಶ್‌ ಗೌಡ ಅವರನ್ನು ರೇಷ್ಮೆ ಅಭಿವೃದ್ಧಿ ಆಯುಕ್ತರು ಮತ್ತು ರೇಷ್ಮೆ ಇಲಾಖೆ ನಿರ್ದೇಶಕರ ಹುದ್ದೆಗೆ ನೇಮಿಸಿ ಶನಿವಾರ ಆದೇಶ ಹೊರಡಿಸಲಾಗಿದೆ.

ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಉಲ್ಲಂಘಿಸಿರುವುದಕ್ಕಾಗಿ ರಾಜೇಶ್‌ ಗೌಡ ವಿರುದ್ಧ ಸುಪ್ರೀಂಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಬಳಿಕ ಅವರನ್ನು ಬಿಡಿಎ ಆಯುಕ್ತರ ಹುದ್ದೆಯಿಂದ ಆಗಸ್ಟ್‌ 26ರಂದು ವರ್ಗಾವಣೆ ಮಾಡಲಾಗಿತ್ತು. ಯಾವುದೇ ಹುದ್ದೆ ತೋರಿಸಿರಿಲ್ಲ. ಹತ್ತು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಶನಿವಾರ ಆದೇಶ ಹೊರಡಿಸಿದ್ದು, ರಾಜೇಶ್‌ ಗೌಡ ಅವರಿಗೆ ಹುದ್ದೆ ತೋರಿಸಲಾಗಿದೆ.

ಇತರ ವರ್ಗಾವಣೆಗಳು: ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌– ಆಯುಕ್ತೆ, ಪಂಚಾಯತ್‌ ರಾಜ್‌ ಇಲಾಖೆ; ಶ್ರೀವಿದ್ಯಾ ಪಿ.– ಹೆಚ್ಚುವರಿ ಕಾರ್ಯದರ್ಶಿ, ಕೌಶಲಾಭಿವೃಧ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ; ಹೆಪ್ಸಿಬಾ ರಾಣಿ ಕೊರ್ಲಪಾಟಿ– ಜಂಟಿ ಕಾರ್ಯದರ್ಶಿ, ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ; ಡಾ. ಶಿವಶಂಕರ ಎನ್‌.– ಕಾರ್ಯನಿರ್ವಾಹಕ ನಿರ್ದೇಶಕ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌.

ಜಾನಕಿ ಕೆ.ಎಂ.– ನಿರ್ದೇಶಕಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ; ಝೆಹೆರಾ ನಸೀಂ– ಜಂಟಿ ನಿರ್ದೇಶಕಿ, ನಗರ ಭೂಸಾರಿಗೆ ನಿರ್ದೇಶನಾಲಯ; ಶುಭಾ ಕಲ್ಯಾಣ್‌– ನಿರ್ದೇಶಕಿ, ಇ–ಆಡಳಿತ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ; ಶಿಲ್ಪಾ ಶರ್ಮ– ವ್ಯವಸ್ಥಾಪಕ ನಿರ್ದೇಶಕಿ, ಕರ್ನಾಟಕ ವಿದ್ಯುತ್‌ ಕಾರ್ಖಾನೆ; ಚಂದ್ರಶೇಖರ್‌ ಎನ್‌.– ವ್ಯವಸ್ಥಾಪಕ ನಿರ್ದೇಶಕ, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು