ಸೋಮವಾರ, ಅಕ್ಟೋಬರ್ 18, 2021
22 °C

ಹೈಕೋರ್ಟ್‌ನ ಕಾಯಂ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ 10 ನ್ಯಾಯಮೂರ್ತಿಗಳ ಪ್ರಮಾಣವಚನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ರಾಜ್ಯ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕಾಯಂಗೊಂಡ 10 ನ್ಯಾಯಮೂರ್ತಿಗಳಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಅವರು ರಾಜಭವನದ ಗಾಜಿನ ಮನೆಯಲ್ಲಿ ಶನಿವಾರ ಪ್ರಮಾಣ ವಚನ ಬೋಧಿಸಿದರು.

ಹೆಚ್ಚುವರಿ ನ್ಯಾಯಮೂರ್ತಿಗಳಾದ ಶಿವಶಂಕರ್ ಅಮರಣ್ಣವರ್, ಮಕ್ಕಿಮನೆ ಎಂ. ಗಣೇಶಯ್ಯ ಉಮಾ, ವೇದವ್ಯಾಸಚಾರ್ ಶ್ರೀಶಾನಂದ, ಹಂಚಟೆ ಸಂಜೀವಕುಮಾರ್, ಪದ್ಮರಾಜ್ ನೇಮಚಂದ್ರ ದೇಸಾಯಿ, ಪಿ. ಕೃಷ್ಣ ಭಟ್, ಮರಳೂರು ಇಂದ್ರಕುಮಾರ್ ಅರುಣ್, ಇಂಗಳಗುಪ್ಪೆ ಸೀತಾರಾಮಯ್ಯ ಇಂದಿರೇಶ್, ರವಿ ವೆಂಕಪ್ಪ ಹೊಸಮನಿ ಮತ್ತು ಸವಣೂರು ವಿಶ್ವಜೀತ್ ಶೆಟ್ಟಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು