ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

6 ತಿಂಗಳಿಗೆ ಒಮ್ಮೆ ಟಿಇಟಿ: ಸಚಿವ ಬಿ.ಸಿ. ನಾಗೇಶ್

Last Updated 22 ಆಗಸ್ಟ್ 2021, 20:30 IST
ಅಕ್ಷರ ಗಾತ್ರ

ತುಮಕೂರು: ಆರು ತಿಂಗಳಿಗೆ ಒಮ್ಮೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭಾನುವಾರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಆರು ತಿಂಗಳಿಗೆ ಒಮ್ಮೆ ನಿಗದಿತ ದಿನಾಂಕದಂದು ಟಿಇಟಿ ನಡೆಸಿದರೆ ಹೆಚ್ಚಿನ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುತ್ತದೆ’ ಎಂದು ಸ್ಪಷ್ಟಪಡಿಸಿದರು.

ಶಿಕ್ಷಕರ ವರ್ಗಾವಣೆಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು, ಸೆ. 5ರಿಂದ ಕೌನ್ಸಿಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ. ಯಾವುದೇ ಗೊಂದಲಕ್ಕೆ ಅವಕಾಶಗಳು ಇಲ್ಲದಂತೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ.

ರಾಜ್ಯದಲ್ಲಿ ಸುಮಾರು 35 ಸಾವಿರದಿಂದ 40 ಸಾವಿರ ಶಿಕ್ಷಕರು ವರ್ಗಾವಣೆಯಾಗಲಿದ್ದು, ಶಿಕ್ಷಕರು ಬಯಸಿದ ಸ್ಥಳಕ್ಕೆ ವರ್ಗಾವಣೆ ಮಾಡಿಕೊಡಲಾಗುತ್ತದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT