ಶನಿವಾರ, ಜೂನ್ 25, 2022
25 °C

ಕುವೆಂಪು ಅವಮಾನಿಸಿದವರನ್ನು ಒದ್ದು ಒಳಗೆ ಹಾಕಿ- ಎಚ್‌ಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 'ನಾಡಗೀತೆ ಮತ್ತು ಕುವೆಂಪು ಅವರನ್ನು ಅಪಮಾನಿಸಿದ ವ್ಯಕ್ತಿಯನ್ನು ಮೊದಲು ಒದ್ದು ಒಳಗೆ ಹಾಕಬೇಕು' ಎಂದು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹೆಸರು ಹೇಳದೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ನಾಡಗೀತೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಸಮಿತಿ ಅಧ್ಯಕ್ಷನನ್ನಾಗಿ ಮಾಡಿರುವುದೇ ತಪ್ಪು. ಕುವೆಂಪು ಮತ್ತು ನಾಡಗೀತೆಗೆ ಅಪಮಾನ ಮಾಡಿದರೆ ಸುಮ್ಮನಿರುವುದಿಲ್ಲ' ಎಂದು ಎಚ್ಚರಿಕೆ ನೀಡಿದರು.

'ಯಾವುದೋ ಒಂದು ವಿಷಯಕ್ಕೆ ಟ್ವೀಟ್ ಮಾಡುವವರನ್ನು ಜೈಲಿಗೆ ಹಾಕುತ್ತೀರಿ. ಆದರೆ, ಮಹಾನ್ ಕವಿಯ ಬಗ್ಗೆ ಅವಹೇಳನ ಮಾಡಿದವನನ್ನು ಸುಮ್ಮನೆ ಬಿಟ್ಟಿದ್ದೀರಿ. ಕುವೆಂಪು ಅನೇಕರ ಪ್ರೋತ್ಸಾಹದಿಂದ ಕವಿ ಆದರಂತೆ. ಈ ರೀತಿ ಹೇಳಿದವನ ಹಿನ್ನೆಲೆ ಏನು?’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು