ಬೆಂಗಳೂರು: ಸೃಜನಶೀಲ ಯುವ ಬರಹಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಸ್ಥಾಪಿಸಿರುವ ‘ಟೊಟೊ ಪುರಸ್ಕಾರ’ಕ್ಕೆ ಕನ್ನಡದ ಸೃಜನಶೀಲ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ.

ಈ ಪ್ರಶಸ್ತಿಯನ್ನು ಟಿ.ಎಫ್.ಎ. (ಟೊಟೊ ಫಂಡ್ಸ್ ದಿ ಆರ್ಟ್ಸ್) ಸ್ಥಾಪಿಸಿದೆ. ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ 2022ನೇ ಸಾಲಿನ ಟೊಟೊ ಪುರಸ್ಕಾರಕ್ಕಾಗಿ ಪ್ರವೇಶಗಳನ್ನು ಆಹ್ವಾನಿಸಿದೆ. ಈ ಪುರಸ್ಕಾರವು ₹ 50 ಸಾವಿರ ಒಳಗೊಂಡಿದೆ.

ಭಾರತೀಯ ನಾಗರಿಕರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. 18 ರಿಂದ 29 ವರ್ಷ ವಯಸ್ಸಿನವರಾಗಿರಬೇಕು. ಅಂದರೆ, 1992ರ ಜನವರಿ 1ರ ನಂತರ ಹುಟ್ಟಿದವರಾಗಿದ್ದಲ್ಲಿ ಮಾತ್ರ ಪ್ರವೇಶಗಳನ್ನು ಕಳಿಸಲು ಅರ್ಹರು. ಕಥೆ, ಕವಿತೆ ಮತ್ತು ನಾಟಕ ಈ ಮೂರರಲ್ಲಿ ಯಾವುದೇ ಪ್ರಕಾರದಲ್ಲಿಯಾದರೂ ಪ್ರವೇಶಗಳನ್ನು ಕಳಿಸಬಹುದು. ಈ ಮೂರು ಪ್ರಕಾರಗಳಿಂದ ಒಬ್ಬರನ್ನು ಪುರಸ್ಕಾರಕ್ಕಾಗಿ ಆಯ್ಕೆ ಮಾಡಲಾಗುತ್ತದೆ.

ಪ್ರವೇಶಗಳನ್ನು ಕಳುಹಿಸಲು ಇದೇ 30 ಕೊನೆಯ ದಿನ. ವಿವರಗಳಿಗಾಗಿ http://totofundsthearts.blogspot.in/ ನೋಡಬಹುದು. ಎಂ.ಎಸ್. ವರ್ಡ್ನಲ್ಲಿ ನುಡಿ, ಬರಹ ಅಥವಾ ಯೂನಿಕೋಡ್ ಫಾಂಟ್ ಮೂಲಕ ಪ್ರವೇಶಗಳನ್ನು ಇ–ಮೇಲ್ ವಿಳಾಸ totokannada@gmail.comಗೆ ಕಳುಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.