ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ ರಾಜ್ಯಪಾಲರಿಂದ ಸನ್ಮಾನ

Last Updated 5 ಆಗಸ್ಟ್ 2022, 10:33 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ ಚಂದ್ ಗೆಹ್ಲೋತ್ ಅವರು ನಗರದ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಲಿದ್ದಾರೆ.

ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಸಂಸ್ಮರಣಾ ದಿನವಾದ ಆಗಸ್ಟ್ 9 ರಂದು ಬೆಳಿಗ್ಗೆ 10-30 ಗಂಟೆಗೆ ನಗರದ ಮಲ್ಲೇಶ್ವರ ಬಡಾವಣೆಯಲ್ಲಿರುವ ವಿ. ನಾಗಭೂಷಣ ರಾವ್ ಅವರ ಮನೆಗೆ ತೆರಳಿ ಸನ್ಮಾನಿಸಿ ಗೌರವ ಅರ್ಪಿಸಲಿದ್ದಾರೆ. ಅದೇ ದಿನ ಬೆಳಿಗ್ಗೆ 11-00 ಗಂಟೆಗೆ ಹಲಸೂರು ಬಡಾವಣೆಯಲ್ಲಿರುವ ಆರ್. ನಾರಾಯಣಪ್ಪ ಅವರ ಮನೆಗೆ ತೆರಳಿ ಸನ್ಮಾನಿಸಲಿದ್ದಾರೆ.

ಸ್ವಾತಂತ್ರ್ಯಕ್ಕೆ ಶ್ರಮಿಸಿದ ಇನ್ನುಳಿದ ಸ್ವಾತಂತ್ರ್ಯ ಹೋರಾಟಗಾರರನ್ನು ಅವರ ಮನೆಗಳಿಗೇ ತೆರಳಿ ಜಿಲ್ಲಾಡಳಿತದ ಮೂಲಕ ಅವರ ಮನೆಗಳಲ್ಲೇ ಸನ್ಮಾನಿಸಲು ಕ್ರಮ ವಹಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ರಾಜ್ಯಪಾಲರು ಸೂಚಿಸಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT