ಹುಬ್ಬಳ್ಳಿ: ಲೂಟಿ ಮಾಡುವ ಖಾತೆ ಸಿಗಲಿಲ್ಲ ಎಂದು ಮುಖ್ಯಮಂತ್ರಿ ಬದಲಾವಣೆಗೆ ಸಿ.ಪಿ. ಯೋಗೇಶ್ವರ ಮುಂದಾಗಿದ್ದಾರೆ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. ಇದು ಬಿಜೆಪಿ ಆಡಳಿತ ವೈಖರಿ ತೋರಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಸಂಪೂರ್ಣ ವಿಫಲರಾಗಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ಸಮರ್ಥರಿಲ್ಲ ಎಂದು ಅವರನ್ನೇ ಮುಂದುವರೆಸಲಾಗುತ್ತಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಜನರು ಕೋವಿಡ್ ನಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಸಂಕಷ್ಟಕ್ಕೆ ಸ್ಪಂದಿಸಬೇಕಿದ್ದ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅತ್ಯಾಚಾರ ಪ್ರಕರಣದಲ್ಲಿ ರಮೇಶ ಜಾರಕಿಹೊಳಿಯನ್ನು ತಕ್ಷಣ ಬಂಧಿಸಬೇಕು. ಅವರ ರಕ್ಷಣೆಗೆ ನಿಂತಿರುವ ಸಚಿವ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು. ಹೇಳಿಕೆ ಕೊಟ್ಟ ಮೇಲೂ ಆರೋಪಿಯನ್ನು ಯಾಕೆ ಬಂಧಿಸಿಲ್ಲ. ದೇಶದಲ್ಲಿ ಇಂತಹ ಬೆಳವಣಿಗೆ ಎಲ್ಲಿಯಾದರೂ ನೋಡಲು ಸಾಧ್ಯಾನಾ ಎಂದು ಪ್ರಶ್ನಿಸಿದರು.

ಅತ್ಯಾಚಾರ ಆರೋಪಿ ಗೃಹ ಸಚಿವರನ್ನು ನೇರವಾಗಿ ಭೇಟಿಯಾಗುತ್ತಾರೆ. ತನಿಖಾಧಿಕಾರಿಯನ್ನು ರಜೆ ಮೇಲೆ ಕಳಿಸಿದ್ದರ ಅರ್ಥ ಏನು ಎಂದು ಕೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.