ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದಿಂದ ₹ 7,343 ಕೋಟಿ ಬಿಡುಗಡೆ: ಡಾ.ಶಾಲಿನಿ ರಜನೀಶ್‌

Last Updated 2 ಸೆಪ್ಟೆಂಬರ್ 2021, 21:52 IST
ಅಕ್ಷರ ಗಾತ್ರ

ಬೆಂಗಳೂರು: ಈಆರ್ಥಿಕ ವರ್ಷದಲ್ಲಿ ಜುಲೈ ಅಂತ್ಯದವರೆಗೆ ಕೇಂದ್ರ ಪುರಸ್ಕೃತ ಯೋಜನೆಗಳಿಗಾಗಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ₹ 7,343 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ತಿಳಿಸಿದ್ದಾರೆ.

‘ಪ್ರಜಾವಾಣಿ’ಯ ಗುರುವಾರದ ಸಂಚಿಕೆಯಲ್ಲಿ ಪ್ರಕಟವಾಗಿದ್ದ ‘ಕೈಕೊಟ್ಟ ಕೇಂದ್ರ: ಯೋಜನೆ ಸ್ಥಗಿತ’ ವರದಿಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಈ ಆರ್ಥಿಕ ವರ್ಷದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರದ ಪಾಲಿನಿಂದ ₹ 17,643 ಕೋಟಿ ನಿಗದಿಪಡಿಸಲಾಗಿದೆ. ಈ ಪೈಕಿ ₹ 7,343 ಕೋಟಿ ಬಿಡುಗಡೆಯಾಗಿದ್ದು, ₹ 6,065 ಕೋಟಿ ರಾಜ್ಯದ ಪಾಲಿನ ಹೊಂದಾಣಿಕೆ ಅನುದಾನವನ್ನೂ ಒದಗಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ಜುಲೈ ಅಂತ್ಯದ ವೇಳೆಗೆ 22 ಇಲಾಖೆಗಳಲ್ಲಿ ₹ 13,408 ಕೋಟಿ ಅನುದಾನ ಲಭ್ಯವಿತ್ತು. ₹ 8,815 ಕೋಟಿಯನ್ನು ವೆಚ್ಚ ಮಾಡಿದ್ದು, ಶೇಕಡ 46ರಷ್ಟು ಪ್ರಗತಿ ಸಾಧಿಸಲಾಗಿದೆ. 2020–21ನೇ ಆರ್ಥಿಕ ವರ್ಷದಲ್ಲಿ ಇದೇ ಅವಧಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದ ಪಾಲಿನಿಂದ ₹ 6,110 ಕೋಟಿ ಬಿಡುಗಡೆಯಾಗಿತ್ತು. ಈ ಬಾರಿ ಶೇ 6ರಷ್ಟು ಹೆಚ್ಚಿನ ಮೊತ್ತ ಬಿಡುಗಡೆಯಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT