ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಸೇರ್ಪಡೆ ವಿಷಯ ಮುಗಿದ ಅಧ್ಯಾಯ: ವಿ.ಸೋಮಣ್ಣ

Last Updated 20 ಮಾರ್ಚ್ 2023, 7:32 IST
ಅಕ್ಷರ ಗಾತ್ರ

ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ): ‘ನಾನು ಕಾಂಗ್ರೆಸ್ ಸೇರ್ಪಡೆ ವಿಚಾರ ಈಗ ಮುಗಿದ ಅಧ್ಯಾಯ. ಕಾಂಗ್ರೆಸ್ ಗೆ ಸೇರುವ ವಿಷಯ‌ ನನ್ನ ತಲೆಯಲ್ಲೇ‌ ಇಲ್ಲ’ ಎಂದು ವಸತಿ, ಮೂಲಸೌಕರ್ಯ ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.

ಕೊಳ್ಳೇಗಾಲದಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, 'ನಾನು ನೇರ ರಾಜಕಾರಣಿ. ಏನೇ ಇದ್ದರೂ ನೇರವಾಗಿ ಹೇಳುತ್ತೇನೆ. ಕ್ಷುಲ್ಲಕ ವಿಚಾರಗಳಿಗೆ ಪ್ರತಿಕ್ರಿಯಿಸುವುದಿಲ್ಲ' ಎಂದರು.

'ಎರಡು ತಿಂಗಳಿಂದ ನನ್ನನ್ನು ಮಾಧ್ಯಮದವರು ಉಜ್ಜುತ್ತಾ ಇದ್ದೀರಿ. ಎಷ್ಟು ಬೇಕೋ ಅಷ್ಟು ಉಜ್ಜಿಕೊಳ್ಳಿ' ಎಂದರು.

ಚಾಮರಾಜನಗರ ಜಿಲ್ಲೆಯಿಂದ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, 'ಜಿಲ್ಲೆಯಿಂದ ಸ್ಪರ್ಧಿಸುವ ಬಗ್ಗೆ ಯೋಚನೆ ಮಾಡಿಲ್ಲ. ಚಾಮರಾಜನಗರ ನನ್ನ ಪ್ರೀತಿಯ ಜಿಲ್ಲೆ ಹೌದು. ಆದರೆ ಚುನಾವಣೆಯಲ್ಲಿ ಕಣಕ್ಕಿಳಿಯುವ ಚಿಂತನೆ ಮಾಡಿಲ್ಲ. ಈ ವಿಚಾರದಲ್ಲಿ ಪಕ್ಷದ ತೀರ್ಮಾನವೇ ಅಂತಿಮ' ಎಂದು ಸ್ಪಷ್ಟಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT