ಬುಧವಾರ, ಜನವರಿ 27, 2021
16 °C

ಇನ್ನೂ ಎರಡೂವರೆ ವರ್ಷ ಯಡಿಯೂರಪ್ಪ ಮುಖ್ಯಮಂತ್ರಿ: ಜಗದೀಶ ಶೆಟ್ಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: 'ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಇನ್ನೂ ಎರಡೂವರೆ ವರ್ಷ ಯಡಿಯೂರಪ್ಪ ಅವರೇ ಮುಂದುವರಿಯಲಿದ್ದಾರೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕೂಡ ಇದನ್ನೇ ಸ್ಪಷ್ಟಪಡಿಸಿದ್ದಾರೆ' ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಸತ್ಯಕ್ಕೆ ದೂರವಾದ ವಿಚಾರ ಎಂದರು.

ಹೈಕಮಾಂಡ್ ಸೂಚಿಸಿದರೆ ನೀವು ಮುಖ್ಯಮಂತ್ರಿಯಾಗಲು ಸಿದ್ಧರಿದ್ದೀರಾ ಎಂದು ಕೇಳಿದ್ದಕ್ಕೆ, 'ಅರುಣ್ ಸಿಂಗ್ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ, ಇಂತಹ ಪ್ರಶ್ನೆಯೇ ಉದ್ಭವಿಸುವುದಿಲ್ಲ' ಎಂದರು.

ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ರೇಣುಕಾಚಾರ್ಯ ನಡುವಿನ ವಾಗ್ವಾದ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಆ ವಿಚಾರ ನನಗೆ ಸಂಬಂಧಿಸಿದ್ದಲ್ಲ‌. ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು  ಬಗೆಹರಿಸುತ್ತಾರೆ' ಎಂದರು.

ಹಿಂಜರಿಕೆ‌ ಇಲ್ಲ: 'ಚಾಮರಾಜನಗರಕ್ಕೆ ಬರಲು ನನಗೆ ಹಿಂಜರಿಕೆ ಇಲ್ಲ. ಸ್ಪೀಕರ್ ಆಗಿದ್ದಾಗ, ಸಿಎಂ ಆಗಿದ್ದಾಗ, ಬಂದಿದ್ದೇನೆ. ಈಗ ಕೈಗಾರಿಕಾ ಸಚಿವನಾಗಿ ಬಂದಿದ್ದೇನೆ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು