ಶನಿವಾರ, ಮೇ 15, 2021
24 °C

ಮಾನವ- ವನ್ಯಜೀವಿ ಸಂಘರ್ಷದಿಂದ ಹಸು ಮೃತಪಟ್ಟರೆ ಪರಿಹಾರ ₹ 75 ಸಾವಿರಕ್ಕೆ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಮಾನವ– ವನ್ಯಜೀವಿ ಸಂಘರ್ಷದಿಂದ ಹಸು, ಎಮ್ಮೆ, ಕೋಣ ಮೃತಪಟ್ಟರೆ ಅವುಗಳ ಮಾಲೀಕರಿಗೆ ಸದ್ಯ ನೀಡಲಾಗುತ್ತಿರುವ ಪರಿಹಾರಧನವನ್ನು ₹ 10 ಸಾವಿರದಿಂದ ₹ 75 ಸಾವಿರಕ್ಕೆ ಹೆಚ್ಚಿಸಲಾಗಿದೆ’ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಈ ಸಂಬಂಧಸರ್ಕಾರದಿಂದ ಮಂಗಳವಾರವೇ ಆದೇಶ ಹೊರಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

‘ವನ್ಯಜೀವಿಗಳಿಂದ ಸಾಕು ಪ್ರಾಣಿಗಳ ಹತ್ಯೆ ನಡೆದರೆ ತಕ್ಷಣಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ₹ 20 ಸಾವಿರ ಬಿಡುಗಡೆ ಮಾಡಲು ಅವಕಾಶ ನೀಡಲಾಗಿದೆ. ಆ ನಂತರ ಸ್ಥಳೀಯ ಪಶು ವೈದ್ಯಾಧಿಕಾರಿಗಳು ಸತ್ತ ಸಾಕು ಪ್ರಾಣಿಯನ್ನು  ಪರಿಶೀಲಿಸಿ ಪ್ರಮಾಣಪತ್ರ ನೀಡಿದ ನಂತರ ಉಳಿದ ಮೊತ್ತ (ಗರಿಷ್ಟ ₹ 75,000) ಪಾವತಿಸಬಹುದು ಎಂದು ಸಚಿವರು ತಿಳಿಸಿದ್ದಾರೆ.

‘ಅಲ್ಲದೆ, ಕುರಿ, ಮೇಕೆ, ಆಡು ಮೃತಪಟ್ಟರೆ ಈಗ ನೀಡುತ್ತಿರುವ ₹ 5,000 ಪರಿಹಾರ ಧನವನ್ನು ₹ 10 ಸಾವಿರಕ್ಕೆ ಹೆಚ್ಚಿಸಲಾಗಿದೆ’ ಎಂದು ಲಿಂಬಾವಳಿ ತಿಳಿಸಿದ್ದಾರೆ.

‘ಪರಿಹಾರಧನ ಹೆಚ್ಚಿಸುವಂತೆ ಜನಪ್ರತಿನಿಧಿಗಳು, ರೈತರು ಮತ್ತು ಸಾರ್ವಜನಿಕರ ಬೇಡಿಕೆ ಮುಂದಿಟ್ಟಿದ್ದರು’ ಎಂದು ಅವರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು