ಶುಕ್ರವಾರ, ಸೆಪ್ಟೆಂಬರ್ 24, 2021
21 °C

ಬಿಜೆಪಿ ಆಡಳಿತದ ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಸಿಂಹಪಾಲು: ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳಲ್ಲಿ ಸಿಂಹಪಾಲು ಬಿಜೆಪಿ ಆಡಳಿತದ ಉತ್ತರ ಪ್ರದೇಶದ್ದು ಎಂದು ಕಾಂಗ್ರೆಸ್ ಟೀಕಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್, ‘ಮಹಿಳೆಯರ ಸುರಕ್ಷತೆಯ ಬಗ್ಗೆ ಚಿಂತಿಸದ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಸಿಎಂ ಯೋಗಿ ಅದಿತ್ಯನಾಥ್‌ ಅವರ ಸರ್ಕಾರಗಳು ಅತ್ಯಾಚಾರ ಆರೋಪಿಗಳ ಪರವಾಗಿ ನಿಲ್ಲುವಂತಹ ಕ್ರಮ ಕೈಗೊಂಡಿವೆ. ಮಹಿಳೆಯರ ಸುರಕ್ಷತೆಯ ಬಗ್ಗೆ ಧ್ವನಿ ಎತ್ತಬೇಕಿದೆ’ ಎಂದು ಆಗ್ರಹಿಸಿದೆ.

ಮತ್ತೊಂದು ಟ್ವೀಟ್‌ ಮಾಡಿರುವ ಕಾಂಗ್ರೆಸ್, ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಈ ಎರಡು ವರ್ಷದಲ್ಲಿ ಬರೀ ಅಧಿಕಾರ ಕೇಂದ್ರಿತ ಕಿತ್ತಾಟದಲ್ಲಿಯೇ ಕಳೆದಿದೆ. ಮುಂದೆಯೂ ಪ್ರತಿ ದಿನವೂ ಇದು ಮುಂದುವರೆಯಲಿದೆ. ಜನಪರವಾಗಿ ಒಂದು ದಿನವೂ ಕೆಲಸ ಮಾಡದ ಬಿಜೆಪಿ ಸರ್ಕಾರ, ದುರಾಡಳಿತವನ್ನು ಪ್ರಶ್ನಿಸುವ ವಿಪಕ್ಷ ನಾಯಕರನ್ನು ನಿಂದಿಸುವ ಬದಲು ಉಳಿದ ಸ್ವಲ್ಪ ಸಮಯದಲ್ಲಿಯಾದರೂ ಜನರಿಗಾಗಿ ಕೆಲಸ ಮಾಡಲಿ’ ಎಂದು ವ್ಯಂಗ್ಯವಾಡಿದೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು