ಗುರುವಾರ , ಮೇ 6, 2021
31 °C

ಮಹದಾಯಿ ವಿಚಾರದಲ್ಲಿ ನ್ಯಾಯಮಂಡಳಿ ತೀರ್ಮಾನವೇ ಅಂತಿಮ: ಸಚಿವ ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ‘ಮಹದಾಯಿ ನದಿ ನೀರಿನ ವಿಚಾರದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಏನು ಬೇಕಾದರೂ ಹೇಳಲಿ, ಅದನ್ನು ತೀರ್ಮಾನ ಮಾಡಲು ನ್ಯಾಯಮಂಡಳಿಯಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪ್ರಸಿದ್ಧಿಗೆ ಬರಲು ಯಾರು ಏನು ಬೇಕಾದರೂ ಹೇಳುತ್ತಾರೆ. ಯಾವ ಹೇಳಿಕೆಗೂ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಯಾರೋ ಒಬ್ಬ ಹೇಳಿದರೆ ಏನಾಗುತ್ತದೆ’ ಎಂದು ಪ್ರಶ್ನಿಸಿದರು.

‘ಮಹಾದಾಯಿ ನದಿ ನಮ್ಮ ತಾಯಿ, ಗೋವಾ ರಾಜ್ಯದ ಜೀವನದಿ. ಅದರಿಂದ ಕರ್ನಾಟಕಕ್ಕೆ ನೀರು ಕೊಡುವುದಿಲ್ಲ’ ಎಂದು ಪ್ರಮೋದ ಸಾವಂತ್ ಹೇಳಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು