ಸೋಮವಾರ, ಅಕ್ಟೋಬರ್ 26, 2020
20 °C

‘ಜೀವನ ನಿರ್ವಹಣೆಗಾಗಿ ಆಟೊ ಓಡಿಸುತ್ತಿದ್ದ ವೈದ್ಯರನ್ನು ಕೆಲಸಕ್ಕೆ ನಿಯೋಜಿಸಲಾಗಿದೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಜಿಲ್ಲೆಯ ವೈದ್ಯರೊಬ್ಬರು ಮೇಲಧಿಕಾರಿಗಳ ಕಿರುಕುಳದಿಂದ ಬೇಸತ್ತು ನಗರದಲ್ಲಿ ಆಟೊ ಚಾಲನೆ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದೆ. ಈ ಸುದ್ದಿ ತಮ್ಮ ಗಮನಕ್ಕೆ ಬಂದ ಕೂಡಲೇ ಅವರನ್ನು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನಿಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಶ್ರೀರಾಮುಲು ಅವರು, ‘ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಎಂ.ಎಚ್. ರವೀಂದ್ರನಾಥ್ ಅವರು ದಾವಣಗೆರೆಯಲ್ಲಿ ಬದುಕು ನಿರ್ವಹಣೆಗಾಗಿ ಆಟೋ ಓಡಿಸುತ್ತಿದ್ದಾರೆ ಎಂಬ ಮಾಧ್ಯಮ ವರದಿಗಳು ಗಮನಕ್ಕೆ ಬಂದಕೂಡಲೇ ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದೆ. ಅಂತೆಯೇ ವರದಿ ಪರಿಶೀಲನೆ ಬಳಿಕ ರವೀಂದ್ರನಾಥ್ ಅವರನ್ನು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನಿಯೋಜಿಸಲಾಗಿದೆ. ಹಗಲಿರುಳು ಶ್ರಮಿಸುವ ಎಲ್ಲಾ ವೈದ್ಯರ ಹಿತಾಸಕ್ತಿ ಕಾಪಾಡಲು ನಮ್ಮ ಸರ್ಕಾರ ಬದ್ಧ’ ಎಂದು ತಿಳಿಸಿದ್ದಾರೆ.

ಕುಂದವಾಡ ಸಮೀಪ ಮಹಾಲಕ್ಷ್ಮಿ ಲೇಔಟ್‌ನ ಡಾ.ಎಂ.ಎಚ್. ರವೀಂದ್ರನಾಥ್ ಅವರು ‘ಐಎಎಸ್ ಅಧಿಕಾರಿಗಳ ದುರಾಡಳಿತದಿಂದ ನೋಂದ ಜೀವ’ ಎಂದು ಆಟೊದ ಮೇಲೆ ಬರೆಸಿಕೊಂಡು ಆಟೊ ಚಾಲನೆ ಮಾಡಿ ಗಮನ ಸೆಳೆದಿದ್ದರು.

ಇದನ್ನೂ ಓದಿ: ಐಎಎಸ್ ಅಧಿಕಾರಿಗಳ ಕಿರುಕುಳ ಆರೋಪ; ಆಟೊ ಚಾಲಕನಾದ ವೈದ್ಯ!

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು