ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ತೆಗೆದುಕೊಂಡಿರುವ ಎಲ್ಲಾ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟು ನಿರ್ಧಾರ ಕೈಗೊಳ್ಳುವ ತನಕ ಫಲಿತಾಂಶ ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

‘ಮೊದಲ ಬಾರಿಗೆ ಪರೀಕ್ಷೆ ಬರೆಯುವವರಿಗೆ ಪರೀಕ್ಷೆ ನಡೆಸದೆ, ಪುನರಾವರ್ತಿತ ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಬೇಕು ಎಂಬುದು ತಾರತಮ್ಯ ಆಗಲಿದೆ’ ಎಂದು ಜ್ಞಾನಮಂದಿರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ವಿ. ಶ್ರೀನಿವಾಸಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘ವಿವಿಧ ವರ್ಗದ ಅಭ್ಯರ್ಥಿಗಳ ಸಮಸ್ಯೆ ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗಿದೆ. ಖಾಸಗಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಅಧ್ಯಯನ ಮಾಡದೆ ನೇರವಾಗಿ ದ್ವಿತೀಯ ಪಿಯು ಪರೀಕ್ಷೆ ತೆಗೆದುಕೊಂಡಿದ್ದಾರೆ. ಅವರನ್ನು ಉತ್ತೀರ್ಣ ಮಾಡಲು ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳಿಲ್ಲ. ಹೀಗಾಗಿ, ಪರೀಕ್ಷೆ ಬರೆಯಬೇಕಾಗುತ್ತದೆ’ ಎಂದು ಸರ್ಕಾರಿ ವಕೀಲರು ವಾದಿಸಿದರು.

‘ಪ್ರಥಮ ಪಿಯು ಅಂಕಪಟ್ಟಿ ಇರುವ ವಿದ್ಯಾರ್ಥಿಗಳನ್ನು ಹೊಸ ವಿದ್ಯಾರ್ಥಿಗಳಿಗೆ ಸಮಾನವಾಗಿ ಪರಿಗಣಿಸಬಹುದು’ ಎಂದು ಪೀಠ ಹೇಳಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.