3 ಪಾಲಿಕೆಗಳಿಗೆ ಕೂಡಲೇ ಚುನಾವಣೆ ನಡೆಸಿ: ಹೈಕೋರ್ಟ್

ಬೆಂಗಳೂರು: ಹುಬ್ಬಳ್ಳಿ–ಧಾರವಾಡ, ಕಲಬುರ್ಗಿ ಮತ್ತು ಬೆಳಗಾವಿ ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ (ಎಸ್ಇಸಿ) ಹೈಕೋರ್ಟ್ ನಿರ್ದೇಶನ ನೀಡಿದೆ.
ನಗರ ಸ್ಥಳೀಯ ಸಂಸ್ಥೆಗಳಿಗೆ (ಯುಎಲ್ಬಿ) ಚುನಾವಣೆ ಬಾಕಿ ಇರುವ ಕುರಿತು ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಈ ಮೂರು ಮಹಾನಗರ ಪಾಲಿಕೆಗಳಿಗೆ ವಾರ್ಡ್ ಮರು ವಿಂಗಡಣೆ, ಮೀಸಲು ಅಧಿಸೂಚನೆ, ಮತದಾರರ ಪಟ್ಟಿ ಮತ್ತು ವೇಳಾಪಟ್ಟಿ ಪ್ರಕಟಿಸಿ ನಂತರ 45 ದಿನಗಳಲ್ಲಿ ಚುನಾವಣೆ ನಡೆಸಬೇಕು’ ಎಂದು ಆದೇಶಿಸಿದೆ.
ರಾಜ್ಯದ 10 ನಗರಸಭೆ, 6 ಪುರಸಭೆ ಮತ್ತು 2 ಪಟ್ಟಣ ಪಂಚಾಯಿತಿಗಳಲ್ಲಿ ಚುನಾವಣೆ ಬಾಕಿ ಇದೆ ಎಂದು ಆಯೋಗ ನ್ಯಾಯಾಲಯಕ್ಕೆ ಮಾಹಿತಿ ನೀಡಿತು. ಬೆಳಗಾವಿ ಮತ್ತು ಕಲಬುರ್ಗಿ ಪಾಲಿಕೆಗಳ ಅವಧಿ ಕ್ರಮವಾಗಿ 2019 ಮಾ.9 ರಂದು ಮತ್ತು 2019ರ ಏಪ್ರಿಲ್ 4 ರಂದು ಕೊನೆಗೊಂಡಿದೆ ಎಂದು ವಿವರಿಸಿತು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.