ಭಾನುವಾರ, ಡಿಸೆಂಬರ್ 4, 2022
19 °C

ಪಂಚಮಸಾಲಿಗೆ 2ಎ: ಸಮಿತಿಗೆ ತುರ್ತು ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಿಂಗಾಯತ ಪಂಚಮಸಾಲಿ ಉಪ ಪಂಗಡವನ್ನು ಪ್ರವರ್ಗ 3–ಬಿ ಇಂದ  2–ಎ ವ್ಯಾಪ್ತಿಗೆ ಸೇರ್ಪಡೆ ಮಾಡಬೇಕೆಂಬ ಬೇಡಿಕೆ ಪರಿಶೀಲಿಸಿ ವರದಿ ಸಲ್ಲಿಸಲು ರಚಿಸಲಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿದ ಅರ್ಜಿಗೆ ಸಂಬಂಧಿಸಿದಂತೆ, ಸಮಿತಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಸರ್ಕಾರದ ಆದೇಶ ಪ್ರಶ್ನಿಸಿ, ‘ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ’ದ ಪ್ರಧಾನ ಕಾರ್ಯದರ್ಶಿ ವೆಂಕಟರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಉನ್ನತ ಮಟ್ಟದ ಸಮಿತಿಗೆ ತುರ್ತು ನೋಟಿಸ್‌ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ‘ಅಧ್ಯಕ್ಷರ ಹೆಸರಿನಲ್ಲಿ ಸಮಿತಿಯನ್ನು ಪ್ರತಿವಾದಿ ಮಾಡಿ’ ಎಂದು ಅರ್ಜಿದಾರರಿಗೆ ಸೂಚಿಸಿ ವಿಚಾರಣೆ ಮುಂದೂಡಿತು.

‘ರಿಟ್‌ ಅರ್ಜಿಯ ಮುಂದಿನ ಆದೇಶದವರೆಗೆ ಮುಂದುವರಿಯಬಾರದು’ ಎಂದು ಸಮಿತಿಗೆ ಸೂಚಿಸಿ ಇದೇ
12ರಂದು ಹೊರಡಿಸಿರುವ ಮಧ್ಯಂತರ ಆದೇಶವನ್ನು ಮುಂದಿನ ವಿಚಾರಣೆವ
ರೆಗೂ ವಿಸ್ತರಿಸಲಾಗಿದೆ. ಪಂಚಮಸಾಲಿ ಉಪ ಪಂಗಡವನ್ನು 3–ಬಿ ಪ್ರವರ್ಗದಿಂದ 2–ಎ ವ್ಯಾಪ್ತಿಗೆ ಸೇರ್ಪಡೆ ಮಾಡುವುದೂ ಸೇರಿದಂತೆ ಇತರೆ ಸಮಯದಾಯಗಳ ಮೀಸಲಾತಿ ಬೇಡಿಕೆ ಪರಿಶೀಲಿಸಿ ವರದಿ ಸಲ್ಲಿಸಲು ನಿವೃತ್ತ ನ್ಯಾಯಮೂರ್ತಿ ಸುಭಾಷ್ ಅಡಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರವು 2021ರ ಜುಲೈ 1ರಂದು ಆದೇಶ ಹೊರಡಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು