ಶನಿವಾರ, ಅಕ್ಟೋಬರ್ 31, 2020
22 °C

ಗ್ರಾಮ ಪಂಚಾಯಿತಿ ಚುನಾವಣೆಗೆ ಅಡೆತಡೆ ಇಲ್ಲ: ಹೈಕೋರ್ಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ರಾಜ್ಯದ 5,800 ಗ್ರಾಮ ಪಂಚಾಯಿತಿಗಳ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲು ಯಾವುದೇ ಅಡೆತಡೆಗಳಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಿ ಮೇ 28ರಲ್ಲಿ ಚುನಾವಣಾ ಆಯೋಗ ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ವಿಧಾನ ಪರಿಷತ್ತಿನ ಸದಸ್ಯ ಕೆ.ಸಿ. ಕೊಂಡಯ್ಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘ಅಂತಿಮ ಮತದಾರರ ಪಟ್ಟಿ ಮತ್ತು ಮೀಸಲಾತಿ ಅಧಿಸೂಚನೆಗಳನ್ನು ಆಗಸ್ಟ್‌ನಲ್ಲಿ ಪ್ರಕಟಿಸಲಾಗಿದೆ. ದಿನಾಂಕ ನಿಗದಿಗೂ ಮುನ್ನ ಪೂರ್ವ ತಯಾರಿಗೆ ಸಮಯ ಬೇಕು’ ಎಂದು ಆಯೋಗ ಮನವಿ ಮಾಡಿತು. ‘ಈಗಾಗಲೇ ಸಮಯ ಮೀರಿದೆ’ ಎಂದು ಪೀಠ ಹೇಳಿತು.

‘ಚುನಾವಣೆ ನಡೆಸಲು ₹250 ಕೋಟಿಯನ್ನು ಆಯೋಗ ಕೇಳಿದೆ. ಇದರಲ್ಲಿ ₹125 ಕೋಟಿ ನೀಡಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ’ ಎಂದು ರಾಜ್ಯ ಸರ್ಕಾರ ವಿವರ ನೀಡಿತು. ಅಗತ್ಯ ಇರುವ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪೀಠ ನಿರ್ದೇಶನ ನೀಡಿತು. ವಿಚಾರಣೆಯನ್ನ  ಅಕ್ಟೋಬರ್ 9ಕ್ಕೆ ಮುಂದೂಡಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು