ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ ಗಣತಿ ಬಗ್ಗೆ ಸರ್ಕಾರ ನಿಲುವು ಸ್ಪಷ್ಟಪಡಿಸಬೇಕು: ಹೈಕೋರ್ಟ್

Last Updated 10 ಆಗಸ್ಟ್ 2020, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನಡೆಸಿದ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ಬಳಸಿಕೊಳ್ಳುವ ಬಗ್ಗೆ ತನ್ನ ನಿಲುವು ಸ್ಪಷ್ಟಪಡಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಈ ಸಂಬಂಧಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ಪೀಠ,‘ಸಮೀಕ್ಷಾ ವರದಿಯನ್ನು ಸರ್ಕಾರ ಪ್ರಕಟಿಸಬಯಸುತ್ತದೆಯೇ’ ಎಂದು ಕೇಳಿತು.

‘ಜಾತಿ ಜನಗಣತಿಯ ದತ್ತಾಂಶ ಅಥವಾ ವರದಿಯನ್ನು ಸರ್ಕಾರ ಅವಲಂಬಿಸಲು ಬಯಸದಿದ್ದರೆ ವಿಷಯವನ್ನು ಮುಕ್ತಾಯಗೊಳಿಸಬಹುದು’ ಎಂದು ಪೀಠ ಹೇಳಿತು.

‘ಜಾತಿ ಜನಗಣತಿ ನಡೆಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ. ಕೇಂದ್ರ ಸರ್ಕಾರ ಮಾತ್ರ ಈ ಪ್ರಕ್ರಿಯೆ ನಡೆಸಬಹುದು’ ಎಂದು ಕೇಂದ್ರ ಸರ್ಕಾರದ ಪರ ವಕೀಲರು ತಿಳಿಸಿದರು.

‘ಜಾತಿ ಜನಗಣತಿ ನಡೆಸುವುದು ಸಂವಿಧಾನದ 245 ಮತ್ತು 246ನೇ ಪರಿಚ್ಛೇದದ ಉಲ್ಲಂಘನೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಗಣತಿ ನಡೆಸುವ ಅಧಿಕಾರ ಇಲ್ಲ. ಆದರೂ ರಾಜ್ಯ ಸರ್ಕಾರ ₹100 ಕೋಟಿ ವೆಚ್ಚ ಮಾಡಿದೆ’ ಎಂದು ಆರೋಪಿಸಿ ಶಿವರಾಜ್ ಕಣಶೆಟ್ಟಿ ಹಾಗೂ ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT