ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿ ಕಾಶ್ಮೀರ್ ಫೈಲ್ಸ್‌ | ಬಘೇಲ್‌ರನ್ನು ಸೋನಿಯಾ ವಜಾಗೊಳಿಸಬಹುದೇ –ಬಿಜೆಪಿ ಪ್ರಶ್ನೆ

Last Updated 17 ಮಾರ್ಚ್ 2022, 9:20 IST
ಅಕ್ಷರ ಗಾತ್ರ

ಬೆಂಗಳೂರು: ಛತ್ತೀಸ್‌ಗಡಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರು ‘ದಿ ಕಾಶ್ಮೀರ್ ಫೈಲ್ಸ್‌’ ಸಿನಿಮಾ ವೀಕ್ಷಿಸುವಂತೆ ಕಾಂಗ್ರೆಸ್‌ ಶಾಸಕರಿಗೆ ಕರೆ ನೀಡಿರುವುದನ್ನು ಬಿಜೆಪಿ ಸ್ವಾಗತಿಸಿದೆ.

‘ದಿ ಕಾಶ್ಮೀರ್ ಫೈಲ್ಸ್‌’ ಸಿನಿಮಾ ವೀಕ್ಷಣೆ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರೆಸ್‌ ಆಡಳಿತವಿರುವ ಛತ್ತೀಸ್‌ಗಡದಲ್ಲಿ ಸಿಎಂ ಭೂಪೇಶ್‌ ಬಘೇಲ್‌ ‘ದಿ ಕಾಶ್ಮೀರ್ ಫೈಲ್ಸ್‌’ ಸಿನಿಮಾ ನೋಡುವಂತೆ ಕಾಂಗ್ರೆಸ್‌ ಪಕ್ಷದ ಶಾಸಕರಿಗೆ ಕರೆ ನೀಡಿದ್ದಾರೆ ಹಾಗೂ ಸ್ವತಃ ಸಿನಿಮಾ ನೋಡಿದ್ದಾರೆ. ಕಾಲ್ಪನಿಕ, ಯಕಶ್ಚಿತ್‌ ಎಂದ ಕಾಂಗ್ರೆಸ್‌ನವರು ಈಗ ಏನು ಹೇಳುತ್ತಾರೆ’ ಎಂದು ಪ್ರಶ್ನಿಸಿದೆ.

ಛತ್ತೀಸ್‌ಗಡಮುಖ್ಯಮಂತ್ರಿಯನ್ನು ಸೋನಿಯಾ ಗಾಂಧಿ ವಜಾಗೊಳಿಸಬಹುದೇ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಕಾಶ್ಮೀರದಲ್ಲಿ ನಡೆದ ಹಿಂದೂಗಳ ಮಾರಣಹೋಮವನ್ನು ಕಾಂಗ್ರೆಸ್‌ ಯಕಶ್ಚಿತ್‌, ಕಾಲ್ಪನಿಕ ಎನ್ನುತ್ತಿದೆ. ಕಾಂಗ್ರೆಸ್‌ ಹಿಂದೂ ವಿರೋಧಿ ನಿಲುವನ್ನು ಆಗಾಗ್ಗೆ ಪ್ರದರ್ಶಿಸುತ್ತಾ ಬರುತ್ತಿದೆ.ಸತ್ಯ ತೆರೆದಿಟ್ಟಿರುವ ‘ದಿ ಕಾಶ್ಮೀರ್ ಫೈಲ್ಸ್‌’ ಸಿನಿಮಾವನ್ನು ಕಾಂಗ್ರೆಸ್‌ ಪಕ್ಷಕ್ಕೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ’ ಎಂದು ಬಿಜೆಪಿ ಕಿಡಿಕಾರಿದೆ.

ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್‌’ ಸಿನಿಮಾ ಕುರಿತು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಕೆಸರೆರಚಾಟ ಜೋರಾಗುತ್ತಿದೆ.

ಈ ಸಿನಿಮಾ 1990ರ ದಶಕದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿನ ಕಾಶ್ಮೀರಿ ಪಂಡಿತರ ಒತ್ತಾಯದ ವಲಸೆ ಹಾಗೂ ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳು, ಅನ್ಯಾಯವನ್ನು ಬಿಂಬಿಸುವ ಕಥಾ ಹಂದರವನ್ನು ಒಳಗೊಂಡಿದೆ.

ಕಳೆದ ವಾರ ಬಿಡುಗಡೆಯಾದ ಈ ಚಿತ್ರದಲ್ಲಿ ಅನುಪಮ್ ಖೇರ್, ಪುನೀತ್‌ ಇಸ್ಸರ್‌, ಮಿಥುನ್ ಚಕ್ರವರ್ತಿ, ದರ್ಶನ್‌ ಕುಮಾರ್‌, ಪ್ರಕಾಶ್‌ ಬೆಳವಾಡಿ, ಪಲ್ಲವಿ ಜೋಷಿ ನಟಿಸಿದ್ದಾರೆ.

ಈ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ದೇಶದಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ.

ಕರ್ನಾಟಕ, ಮಧ್ಯಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT