ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸಕ್ತಿ ಇದ್ದರೆ ಬನ್ನಿ, ಗೊಂದಲ ಸೃಷ್ಟಿಸಬೇಡಿ–ಸಿದ್ದರಾಮಯ್ಯಗೆ ಈಶ್ವರಪ್ಪ

ಎಸ್‌.ಟಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಕುರುಬ ಸಮುದಾಯದಿಂದ ಹೋರಾಟ
Last Updated 17 ಜನವರಿ 2021, 7:14 IST
ಅಕ್ಷರ ಗಾತ್ರ

ಬೆಂಗಳೂರು: ‘ಕುರುಬ ಸಮುದಾಯವನ್ನು ಎಸ್‌.ಟಿ ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿ ನಡೆಯತ್ತಿರುವ ಹೋರಾಟಕ್ಕೆ ಸಿದ್ದರಾಮಯ್ಯ ಸಂತೋಷದಿಂದ ಬರುವುದಾದರೆ ಬರಲಿ. ಇಲ್ಲಾಂದ್ರೆ ಸುಮ್ಮನೆ ಇರಲಿ. ಅನಗತ್ಯವಾಗಿ ಗೊಂದಲ ಸೃಷ್ಟಿಸುವುದು ಬೇಡ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಸಲಹೆ ನೀಡಿದರು.

ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಯಾರು ಏನೇ ಮಾತನಾಡಿಕೊಳ್ಳಲಿ. ನಾನಂತೂ ಈ ಹೋರಾಟದಲ್ಲಿ ಇರುತ್ತೇನೆ. ಕಾಗಿನೆಲೆಯಿಂದ ಪಾದಯಾತ್ರೆ ಆರಂಭವಾಗಿದೆ. ಫೆ. 7ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸುಮಾರು ಹತ್ತು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಈ ಸಮಾವೇಶಕ್ಕೆ ಸಿದ್ದರಾಮಯ್ಯ ಬರುತ್ತಾರೊ ಇಲ್ಲವೊ ಗೊತ್ತಿಲ್ಲ’ ಎಂದರು.

‘ಎಸ್‌.ಟಿ ಹೋರಾಟದ ಹಿಂದೆ ಆರ್‌ಎಸ್‌ಎಸ್ ಇದೆ, ಯಾಕೆ ಪಾದಯಾತ್ರೆ ಎಂದೆಲ್ಲ ಹೇಳುವುದು ಯಾಕೆ. ಆಸಕ್ತಿ ಇದ್ದರೆ ಬನ್ನಿ ಇಲ್ಲಾಂದ್ರೆ ಸುಮ್ಮನೆ ಇರಿ. ಅನಗತ್ಯವಾಗಿ ಗೊಂದಲ ಸೃಷ್ಟಿ ಮಾಡುವುದು ಯಾಕೆ. ಸಮುದಾಯಕ್ಕೆ ಎಸ್‌.ಟಿ ಮಾನ್ಯತೆ ಸಿಗುವ ವಿಶ್ವಾಸ ನಮಗಿದೆ. ಸಿದ್ದರಾಮಯ್ಯ ಮಾಡುತ್ತಿರುವುದು ಒಳ್ಳೆಯದಲ್ಲ’ ಎಂದರು,

‘ಅವರು (ಸಿದ್ದರಾಮಯ್ಯ) ಮುಖ್ಯಮಂತ್ರಿ ಆಗಿದ್ದಾಗ ಯಾಕೆ ಮಾಡಲಿಲ್ಲ. ಯಾರು ಏನು ಬೇಕಾದರೂ ಅಂದುಕೊಳ್ಳಲಿ. ನಾನಂತೂ ಹೋರಾಟದಲ್ಲಿ ಇದ್ದೇ ಇರುತ್ತೇನೆ’ ಎಂದೂ ಹೇಳಿದರು.

ಬಿಜೆಪಿ ಪ್ರಮುಖರ ಸಭೆಯಲ್ಲಿ ಅಮಿತ್ ಶಾ ಮಾರ್ಗದರ್ಶನ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ‘ಮುಂದಿನ ಚುನಾವಣೆಯಲ್ಲಿ ಮತ್ತೆ ಮತ್ತೆ ಅಧಿಕಾರಕ್ಕೆ ತರಬೇಕೆಂದು ಹೇಳಿದ್ದಾರೆ. ಸ್ವತಂತ್ರವಾಗಿ ಪೂರ್ಣ ಪ್ರಮಾಣದಲ್ಲಿ ಪಕ್ಷ ಗೆಲ್ಲಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಮಾರ್ಗದರ್ಶನ ನೀಡಿದ್ದಾರ’ ಎಂದರು.

‘ರಾಜ್ಯದಲ್ಲಿ ಪಕ್ಷದ ಸಂಘಟನೆ ನಡೆಯುತ್ತಿದೆ. ಈ ಹಿಂದೆ 25 ಲೋಕಸಭಾ ಕ್ಷೇತ್ರಗಳನ್ನು ನಾವು (ಬಿಜೆಪಿ) ಗೆದ್ದಿದ್ದೇವೆ. ಉಪಚುನಾವಣೆಯಲ್ಲೂ ಗೆಲುವು ಸಾಧಿಸಿದ್ದೇವೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಗಮನಾರ್ಹ ಸಾಧನೆ ಮಾಡಿದ್ದೇವೆ’ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT