ಬುಧವಾರ, ಡಿಸೆಂಬರ್ 1, 2021
21 °C

ಡ್ರಗ್ಸ್‌ ಪ್ರಕರಣಕ್ಕೆ ತಾರ್ಕಿಕ ಅಂತ್ಯ: ಗೃಹ ಸಚಿವ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ರಾಜ್ಯದಲ್ಲಿ ದಾಖಲಾಗಿರುವ ಮಾದಕ ವಸ್ತು ಪ್ರಕರಣಗಳಿಗೆ ತಾರ್ಕಿಕ ಅಂತ್ಯ ಕಾಣಿಲಾಗುವುದು. ತನಿಖೆಯಲ್ಲಿ ಪೊಲೀಸರಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಡ್ರಗ್ಸ್‌ ಪ್ರಕರಣಗಳಿಗೆ ಸಂಬಂಧಿಸಿ ಈವರೆಗೆ ಆಗಿರುವ ತನಿಖೆಯ ಪ್ರಗತಿ ಕುರಿತು ಮುಖ್ಯ
ಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸೋಮವಾರ ಮಾಹಿತಿ ನೀಡಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.

‘ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸುತ್ತಿದ್ದಾರೆ. ಯಾರ ಒತ್ತಡವೂ ಅವರ ಮೇಲಿಲ್ಲ. ಇದರಿಂದಾಗಿ ಉತ್ತಮ
ವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಿವೆ. ಪ್ರತಿದಿನವೂ ಹೊಸ ಮಾಹಿತಿಗಳು ಮತ್ತು ಸಾಕ್ಷ್ಯಗಳು ಬಯಲಿಗೆ ಬರುತ್ತಿವೆ. ಹಲವರು ಸಿಕ್ಕಿಬೀಳುತ್ತಿದ್ದಾರೆ. ಜಾಲವನ್ನು ಸಂಪೂರ್ಣ ಬಯಲಿಗೆಳೆಯಬೇಕಾಗಿರುವುದರಿಂದ ಈ ಹಂತದಲ್ಲಿ ಸೂಕ್ಷ್ಮ ಮಾಹಿತಿಗಳನ್ನು ಮಾಧ್ಯಮ
ಗಳಿಗೆ ನೀಡಲು ಸಾಧ್ಯವಿಲ್ಲ’ ಎಂದು ಅವರು ಹೇಳಿದರು.

‘ಬೆಂಗಳೂರು ಮತ್ತು ರಾಜ್ಯದ ವಿವಿಧ ಭಾಗಗಳಿಗೆ ನೆರೆಯ ರಾಜ್ಯಗಳಿಂದ ಮಾದಕ ದ್ರವ್ಯಗಳು ಬರುತ್ತಿವೆ. ಈ ಕುರಿತು ತನಿಖೆ ನಡೆಸಲು ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿ ಮತ್ತು ಎಸ್ಪಿಗಳಿಗೆ ಸೂಚಿಸಲಾಗಿದೆ. ನೆರೆ ರಾಜ್ಯಗಳ ಪೊಲೀಸ್‌ ಅಧಿಕಾರಿಗಳ ಜತೆ ಸಂಪರ್ಕದಲ್ಲಿರಲೂ
ತಿಳಿಸಲಾಗಿದೆ. ಗಡಿಯಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಾದ ತಪಾಸಣೆ ನಡೆಸಲಾಗುವುದು. ಇದಕ್ಕಾಗಿ ಅಧಿಕಾರಿಗಳ ಸಭೆ ನಡೆಸಿ, ಸಲಹೆ ಸೂಚನೆಗಳನ್ನು ನೀಡಲಾಗಿದೆ’ ಎಂದು ಬೊಮ್ಮಾಯಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು