ಬೆಂಗಳೂರು: ಬೆಂಗಳೂರು ಹೊರ ವಲಯದ ಹಲವೆಡೆ ಶುಕ್ರವಾರ ಬೆಳಗ್ಗೆ ಭಾರಿ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಆದರೆ ಇದು ಭೂಕಂಪನವಲ್ಲ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕೆಎಸ್‌ಎನ್‌ಡಿಎಂಸಿ ಸ್ಪಷ್ಟಪಡಿಸಿದೆ.

ಹೆಮ್ಮಿಗೆಪುರ, ಕೆಂಗೇರಿ, ಜ್ಞಾನಭಾರತಿ, ರಾಜರಾಜೇಶ್ವರಿ ನಗರ ಮತ್ತು ಕಗ್ಗಲಿಪುರದ ಕೆಲ ಭಾಗಗಳಲ್ಲಿ ಭಾರಿ ಸದ್ದಿನೊಂದಿಗೆ ಭೂಮಿ ಕಂಪಿಸಿತು ಎಂದು ನಿವಾಸಿಗಳು ಹೇಳಿದ್ದರು. ಬೆಳಗ್ಗೆ 11.50 ರಿಂದ ಮಧ್ಯಾಹ್ನ 12.15ರ ಅವಧಿಯಲ್ಲಿ ಈ ವಿದ್ಯಮಾನ ಸಂಭವಿಸಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೆಎಸ್‌ಎನ್‌ಡಿಎಂಸಿ, ಬೆಂಗಳೂರಿನಲ್ಲಿ ಭೂಕಂಪನ ಆಗಿಲ್ಲ ಎಂದಿದೆ.

‘ಬೆಳಗ್ಗೆ 11.50ರಿಂದ ಮಧ್ಯಾಹ್ನ 12.15ರ ಅವಧಿಯಲ್ಲಿ ಭೂಕಂಪನ / ಸಂಭವನೀಯ ಭೂಕಂಪದ ಸಂಕೇತಗಳು ಹೊಮ್ಮಿವೆಯೇ ಎಂಬುದನ್ನು ವಿಶ್ಲೇಷಕರು ಪರಿಶೀಲಿಸಿದ್ದಾರೆ. ಆದರೆ, ಅಂಥ ಯಾವುದೇ ಸಂಕೇತಗಳು ಕಂಡುಬಂದಿಲ್ಲ’ಎಂದು ಕೆಎಸ್‌ಎನ್‌ಡಿಎಂಸಿ ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.