ಸೋಮವಾರ, ಮಾರ್ಚ್ 1, 2021
17 °C

ಮುಖ್ಯ ಕಾರ್ಯದರ್ಶಿಯಾಗಿ ಪಿ.ರವಿಕುಮಾರ್‌ ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ 1984ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿ ಪಿ. ರವಿಕುಮಾರ್‌ ಗುರುವಾರ ಅಧಿಕಾರ ಸ್ವೀಕರಿಸಿದರು.

ಗುರುವಾರ ಸೇವೆಯಿಂದ ನಿವೃತ್ತರಾದ ಹಾಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ ಅವರು ಸಂಜೆ ಅಧಿಕಾರ ಹಸ್ತಾಂತರ ಮಾಡಿದರು. ರವಿಕುಮಾರ್‌ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಬುಧವಾರ ಆದೇಶ ಹೊರಡಿಸಲಾಗಿತ್ತು.

ನಿರ್ಗಮಿತ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್‌ ಅವರಿಗೆ ಸಚಿವಾಲಯದಿಂದ ಗುರುವಾರ ಬೀಳ್ಕೊಡುಗೆ ನೀಡಲಾಯಿತು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಹಾಗೂ ಹಲವರು ಹಿರಿಯ ಐಎಎಸ್‌ ಅಧಿಕಾರಿಗಳು ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು