ಮೈಸೂರು: ‘ಜೆಡಿಎಸ್‌ನಲ್ಲೇ ಉಳಿಯಬೇಕಾ ಅಥವಾ ಬೇರೆ ಯಾವುದಾದರೂ ಪಕ್ಷಕ್ಕೆ ಸೇರಬೇಕೇ ಎಂಬುದನ್ನು ಕ್ಷೇತ್ರದ ಮತದಾರರ ಅಭಿಪ್ರಾಯ ಪಡೆದು ನಿರ್ಧರಿಸುತ್ತೇನೆ’ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿದರು.

ಶನಿವಾರ ಮಾಧ್ಯಮದವರ ಜತೆ ಮಾತನಾಡಿ, ‘ಈ ಹಿಂದೆ ಮತದಾರರ ಅಭಿಪ್ರಾಯ ಪಡೆಯದೆ ಬಿಜೆಪಿಗೆ ಹೋಗಿ, ಹುಣಸೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದೆ. ಅಂತಹ ತಪ್ಪು ಮತ್ತೆ ಮಾಡುವುದಿಲ್ಲ. ವಿಧಾನಸಭೆ ಚುನಾವಣೆಗೆ ಇನ್ನೂ 23 ತಿಂಗಳುಗಳು ಬಾಕಿಯಿವೆ. ಕಾಂಗ್ರೆಸ್ ಅಥವಾ ಬಿಜೆಪಿ ಸೇರಬೇಕೇ, ಜೆಡಿಎಸ್‌ನಲ್ಲೇ ಮುಂದುವರಿಯಬೇಕೇ ಎಂಬ ಪ್ರಶ್ನೆಯನ್ನು ನನ್ನ ಕ್ಷೇತ್ರದ ಮತದಾರರ ಮುಂದೆ ಇಡುತ್ತೇನೆ. ಅವರ ಅಭಿಪ್ರಾಯ ಪಡೆದು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ’ ಎಂದು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.