ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಇಂದು

ಡಿ. 22ರಂದು ಮೊದಲ ಹಂತದ ಚುನಾವಣೆ ನಡೆದಿದೆ
Last Updated 26 ಡಿಸೆಂಬರ್ 2020, 19:32 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ 109 ತಾಲ್ಲೂಕುಗಳ 2,709 ಗ್ರಾಮ ಪಂಚಾಯಿತಿಗಳ 39,378 ಸ್ಥಾನಗಳಿಗೆ ಭಾನುವಾರ (ಡಿ. 27) ಮತದಾನ ನಡೆಯಲಿದೆ. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.

ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಕೊನೆಯ ಒಂದು ಗಂಟೆ ಅವಧಿಯಲ್ಲಿ ಕೋವಿಡ್‌ ಸೋಂಕಿತರು ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳ ಚುನಾವಣಾ ಫಲಿತಾಂಶ ಡಿ.30ರಂದು ಹೊರಬೀಳಲಿದೆ.

ಡಿ. 22ರಂದು ಮೊದಲ ಹಂತದ ಚುನಾವಣೆ ನಡೆದಿದೆ.

ಎರಡನೇ ಹಂತದ ಚುನಾವಣೆಯಲ್ಲಿ 1,05,431 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಹಂತದಲ್ಲಿ 43,291 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಈ ಪೈಕಿ, 3,697 ಸ್ಥಾನಗಳಿಗೆ ಈಗಾಗಲೇ ಅವಿರೋಧ ಆಯ್ಕೆ ನಡೆದಿದೆ. 216 ಸ್ಥಾನಗಳಿಗೆ ಯಾರೂ ನಾಮಪತ್ರ ಸಲ್ಲಿಸಿಲ್ಲ.

ಈಗಾಗಲೇ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ತಾಲ್ಲೂಕು ದಂಡಾಧಿಕಾರಿಗಳು ಆಯಾ ಜಿಲ್ಲಾ, ತಾಲ್ಲೂಕುಗಳಿಗೆ ಒಳಪಡುವ ಗ್ರಾಮ ಪಂಚಾಯಿತಿ ಮತ್ತು ಹಳ್ಳಿಗಳಿಗೆ ಮಸ್ಟರಿಂಗ್‌ ವ್ಯವಸ್ಥೆ ಮಾಡಿದ್ದಾರೆ. ಚುನಾವಣಾ ಸಿಬ್ಬಂದಿಯನ್ನು ಆಯಾ ಗ್ರಾಮಗಳಿಗೆ ಕಳುಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT