ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ ಚುನಾವಣೆ ದಿನ 2 ಕ್ಷೇತ್ರಗಳ ನೌಕರರಿಗೆ ರಜೆ: ರಾಜ್ಯ ಸರ್ಕಾರ ಆದೇಶ

Last Updated 15 ಅಕ್ಟೋಬರ್ 2020, 10:02 IST
ಅಕ್ಷರ ಗಾತ್ರ

ಬೆಂಗಳೂರು: ನ.3 ರಂದು ಆರ್‌.ಆರ್‌.ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಕಾರಣ ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ–ಕಾಲೇಜುಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಮತದಾನಕ್ಕೆ ಅನುಕೂಲವಾಗಲೆಂದು ರಜೆ ಪ್ರಕಟಿಸಲಾಗಿದೆ. ಒಂದು ವೇಳೆ ಮತದಾರರು ಈ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ, ಕ್ಷೇತ್ರದ ವ್ಯಾಪ್ತಿಯ ಹೊರಗೆ ಕಾರ್ಯ ನಿರ್ವಹಿಸುತ್ತಿದ್ದರೆ, ಅವರಿಗೂ ಪ್ರಜಾಪ್ರತಿನಿಧಿ ಕಾಯ್ದೆ ಅಡಿ ವೇತನ ಸಹಿತ ರಜೆ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಲ್ಲದೆ, ಎಲ್ಲ ವ್ಯಾವಹಾರಿಕ ಸಂಸ್ಥೆಗಳು, ಕೈಗಾರಿಕೆಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಕಾಯಂ, ಗುತ್ತಿಗೆ ಅಥವಾ ದಿನಗೂಲಿ ಆಧಾರದಲ್ಲಿ ಕೆಲಸ ಮಾಡುವವರಿಗೂ ವೇತನ ಸಹಿತ ರಜೆ ನೀಡಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT