ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದವಿ ಕಾಲೇಜು, ಚಿತ್ರಮಂದಿರ ಪುನರಾರಂಭಕ್ಕೆ ರಾಜ್ಯ ಸರ್ಕಾರ ತೀರ್ಮಾನ

ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಭೆ
Last Updated 18 ಜುಲೈ 2021, 7:22 IST
ಅಕ್ಷರ ಗಾತ್ರ

ಬೆಂಗಳೂರು: ಇದೇ 26ರಿಂದ ಪದವಿ ಕಾಲೇಜುಗಳಲ್ಲಿ ಭೌತಿಕ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಸಚಿವರು ಮತ್ತು ಅಧಿಕಾರಿಗಳ ಉನ್ನತಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕನಿಷ್ಠ ಡ ಒಂದು ಡೋಸ್ ಕೋವಿಡ್ ಲಸಿಕೆ ಪಡೆದವರು ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ರಾತ್ರಿ ಕರ್ಫ್ಯೂ ಅವಧಿಯನ್ನು ಪರಿಷ್ಕರಿಸಿದ್ದು, ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ಮಾತ್ರ ಕರ್ಫ್ಯೂ ಇರಲಿದೆ. ಚಿತ್ರಮಂದಿರಗಳು ಮತ್ತು ರಂಗಮಂದಿರಗಳಲ್ಲಿ ಶೇಕಡ 50ರಷ್ಟು ಆಸನಗಳ ಭರ್ತಿಯೊಂದಿಗೆ ಪ್ರದರ್ಶನ ಆರಂಭಿಸಲು ಅನುಮತಿ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT