ಗುರುವಾರ , ಡಿಸೆಂಬರ್ 3, 2020
23 °C

ರಾಮದುರ್ಗ: ಬಸವೇಶ್ವರರ ಪ್ರತಿಮೆ ವಿರೂಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮದುರ್ಗ: ತಾಲ್ಲೂಕಿನ ಬಿಜಗುಪ್ಪಿ ಗ್ರಾಮದ ಪ್ರವೇಶ ದ್ವಾರದ ಬಳಿಯ ಜಗಜ್ಯೋತಿ ಬಸವೇಶ್ವರರ ಪ್ರತಿಮೆಯ ಎಡಗೈಯನ್ನು ಕಿಡಿಗೇಡಿಗಳು ತುಂಡರಿಸಿರುವ ಪ್ರಕರಣ ಭಾನುವಾರ ಬೆಳಕಿಗೆ ಬಂದಿದೆ.

ಬಸವೇಶ್ವರ ಪ್ರತಿಮೆಯ ಇಷ್ಟಲಿಂಗವಿದ್ದ ಎಡಗೈಯನ್ನು ಕಿಡಿಗೇಡಿಗಳು ತುಂಡರಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಜನ ಜಮಾಯಿಸಿ, ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಕಟಕೋಳ ಪೊಲೀಸ್‌ ಠಾಣೆಯ ಸಿಬ್ಬಂದಿ ಪ್ರತಿಮೆಯನ್ನು ಸ್ಥಳಾಂತರಿಸಿದ್ದು, ಬಿಗಿಬಂದೋಬಸ್ತ್‌ ಏರ್ಪಡಿಸಿದ್ದಾರೆ. 

ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿ, ‘ಪ್ರತಿಮೆಯನ್ನು ವಿರೂಪಗೊಳಿಸಿರುವ ಕಿಡಿಗೇಡಿಗಳನ್ನು ತಕ್ಷಣ ಪತ್ತೆ ಹಚ್ಚಿ, ಬಂಧಿಸಬೇಕು’ ಎಂದು ಒತ್ತಾಯಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು