ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಂದಾಲ್‌ಗೆ ಭೂಮಿ ನೀಡುವ ನಿರ್ಧಾರ ಹಿಂತೆಗೆತ ನಮ್ಮ ಹೋರಾಟದ ಫಲ: ಯತ್ನಾಳ್

Last Updated 27 ಮೇ 2021, 15:29 IST
ಅಕ್ಷರ ಗಾತ್ರ

ಬೆಂಗಳೂರು: ಜಿಂದಾಲ್ ಕಂಪನಿಗೆ ಭೂಮಿ ನೀಡುವ ನಿರ್ಧಾರ ಹಿಂತೆಗೆತ ನಮ್ಮ ಹೋರಾಟದ ಫಲ. ಪ್ರಧಾನಿ ಮೋದಿ ಸೇರಿ ಕೇಂದ್ರದ ನಾಯಕರಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದೆವು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ನಮ್ಮ ರಾಜ್ಯದ ನೆಲ ಜಲ ಮತ್ತು ನೈಸರ್ಗಿಕ ಸಂಪತ್ತು ಉಳಿಸಲು ನಾವು ಇತ್ತೀಚೆಗೆ ಕರ್ನಾಟಕ ಸರ್ಕಾರ ತೆಗೆದುಕೊಂಡ ಸುಮಾರು 3660 ಎಕರೆ ಖನಿಜ ಸಂಪತ್ತು ಹೊಂದಿದ ಪ್ರತಿ ಎಕರೆಗೆ ಕೋಟ್ಯಂತರ ಬೆಲೆ ಬಾಳುವ ಭೂಮಿಯನ್ನು ಕೇವಲ ಎಕರೆಗೆ ಒಂದು ಲಕ್ಷ ಇಪ್ಪತ್ತೈದು ಸಾವಿರ ರೂಪಾಯಿಗೆ ಜಿಂದಾಲ್ ಕಂಪನಿಗೆ ಮಾರಾಟ ಮಾಡುವ ರಾಜ್ಯ ಸರ್ಕಾರದ ಕ್ಯಾಬಿನೆಟ್ ನಿರ್ಣಯವನ್ನು ವಿರುದ್ಧ ನಾವು ನಮ್ಮ ರಾಷ್ಟ್ರದ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ನಮ್ಮ ಕೇಂದ್ರ ಗೃಹ ಸಚಿವರಾದ ಶ್ರೀ ಅಮೀತ ಶಾ ಜೀ ಹಾಗೂ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ. ಪಿ. ನಡ್ಡಾ ಅವರಿಗೆ ಪತ್ರ ಮುಖೇನ ಶ್ರೀ ಯಡಿಯೂರಪ್ಪನವರು ತೆಗೆದುಕೊಂಡ ನಿರ್ಧಾರವನ್ನು ವಿರೋಧಿಸಿ ಪತ್ರ ಬರೆದಿದ್ದೆವು.

ನಮ್ಮ ಪಕ್ಷದ ಹೈಕಮಾಂಡ್ ನೀಡಿದ ಖಡಕ್ ಸೂಚನೆ ಹಿನ್ನೆಲೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಜಿಂದಾಲ್ ಸ್ಟೀಲ್ ಕಂಪೆನಿಗೆ ನೀಡಿದ್ದ ಬಹುಮೂಲ್ಯ ನಮ್ಮ ನಾಡಿನ ಭೂಮಿಯ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು ವಾಪಸ್ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ನಮ್ಮ ಹೋರಾಟಕ್ಕೆ ಸ್ಪಂದಿಸಿ ನಮ್ಮ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜೀ ಅವರು ಹಾಗೂ ಎಲ್ಲಾ ಪಕ್ಷದ ನಾಯಕರಿಗೆ ನಮ್ಮ ಹೋರಾಟಕ್ಕೆ ಬೆಂಬಲಿಸಿದ ಎಲ್ಲಾ ನಾಡಿನ ಮಹಾಜನತೆಗೆ ಹಾಗೂ ನಮ್ಮ ನಾಡಿನ ಮೌಲ್ಯಾಧಾರಿತ ಮಾಧ್ಯಮದವರಿಗೆ ಹೃದಯ ಪೂರ್ವಕ ಕೃತಜ್ಙತೆಗಳು ಎಂದು ಪೋಸ್ಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT