ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ನಡೆದಿದೆ: ಅಶ್ವತ್ಥ ನಾರಾಯಣ

ಶಿವಮೊಗ್ಗ: ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ನಡೆದಿದೆ. ಉದ್ದೇಶಪೂರ್ವಕವಾಗಿ ಹಗರಣದಲ್ಲಿ ಸಿಲುಕಿಸಿರುವ ಶಂಕೆ ಇದೆ. ತನಿಖೆಯಿಂದ ಸತ್ಯ ಹೊರಬರಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.
ಹೆಲಿಪ್ಯಾಡ್‌ನಲ್ಲಿ ಬುಧವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.
ಇದನ್ನೂ ಓದಿ.. ಲೈಂಗಿಕ ದುರ್ಬಳಕೆ, ವಂಚನೆ ಆರೋಪ: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆ
ಮೂರನೇ ವ್ಯಕ್ತಿ ದೂರು ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸತ್ಯ ತಿಳಿಯಲು ಕಾಲವಕಾಶಬೇಕಿದೆ. ಪಕ್ಷದ ವರಿಷ್ಠರು ಗಮನಿಸುತ್ತಿದ್ದಾರೆ. ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಇದನ್ನೂ ನೋಡಿ.. VIDEO: ಇನ್ನಷ್ಟು ನಾಯಕರ ಅಕ್ರಮಗಳು ಶೀಘ್ರ ಬಹಿರಂಗ: ದಿನೇಶ್ ಕಲ್ಲಹಳ್ಳಿ ಬಾಂಬ್
ಮೀಸಲಾತಿ ಪರಿಶೀಲನೆಗೆ ಸರ್ಕಾರ ಸಮಿತಿ ರಚಿಸಿದೆ. ವರದಿಯ ನಂತರ ಯಾವ ಸಮುದಾಯಕ್ಕೆ ಎಷ್ಟು ಪ್ರಮಾಣದ ಮೀಸಲಾತಿ ಎಂದು ನಿರ್ಧರಿಸಲಾಗುವುದು. ಎಲ್ಲಾ ಹಿಂದುಳಿದ ಸಮುದಾಯಗಳಿಗೂ ನ್ಯಾಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.