ಸೋಮವಾರ, ಮಾರ್ಚ್ 20, 2023
30 °C

ಮೀಸಲಾತಿ ನಿಗದಿಯಲ್ಲಿ ಹಸ್ತಕ್ಷೇಪವಿಲ್ಲ: ಸಚಿವ ಕೆ.ಎಸ್.ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ‘ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ನಿಗದಿಯಲ್ಲಿ ಸರ್ಕಾರದ ಪಾತ್ರವಿಲ್ಲ. ಪಟ್ಟಿ ಕುರಿತು ಅಸಮಾಧಾನವಿದ್ದರೆ ಚುನಾವಣಾ ಆಯೋಗಕ್ಕೆ ಆಕ್ಷೇಪಣೆ ಸಲ್ಲಿಸಬೇಕು’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಬಿ.ಆರ್. ಪ್ರಾಜೆಕ್ಟ್‌ ಬಳಿ ಸೋಮವಾರ ಭದ್ರಾ ಜಲಾಶಯ ವೀಕ್ಷಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಮೀಸಲಾತಿ ಕರಡು ಪಟ್ಟಿಗೆ ರಾಜ್ಯದ ಹಲವು ಕ್ಷೇತ್ರಗಳಲ್ಲಿ ಪಕ್ಷಭೇದವಿಲ್ಲದೆ ಆಕ್ಷೇಪಗಳು ಕೇಳಿಬಂದಿವೆ. ಕೆಲವರು ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಾರೆ. ಚುನಾವಣಾ ಆಯೋಗ ರಾಜ್ಯ ಸರ್ಕಾರದ ಅಭಿಪ್ರಾಯ ಕೇಳಿ ಮೀಸಲಾತಿ ಪ್ರಕಟಿಸುವುದಿಲ್ಲ. ರಾಜಕೀಯ ಹಸ್ತಕ್ಷೇಪ ನಡೆದಿಲ್ಲ ಎಂದು ಪ್ರತಿಪಾದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು