ಭಾನುವಾರ, ಏಪ್ರಿಲ್ 11, 2021
32 °C

ಕೋವಿಡ್: ಗಡಿಯಲ್ಲಿ ಬಿಗಿ ಕ್ರಮ, ಲಾಕ್ ಡೌನ್ ಸದ್ಯಕ್ಕಿಲ್ಲ: ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಸದ್ಯಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಉದ್ದೇಶ ಇಲ್ಲ. ಆದರೆ, ಗಡಿ ಭಾಗಕ್ಕೆ ಹೊಂದಿಕೊಂಡ ಪ್ರದೇಶಗಳಲ್ಲಿ ಕೋವಿಡ್ ನಿಯಮಗಳನ್ನು ಸೋಮವಾರ (ಫೆ.22)ದಿಂದ ಬಿಗಿಗೊಳಿಸಲಾಗುವುದು ಎಂದು  ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದರು.

ಕೊರೊನಾ ನಿಯಂತ್ರಣದ ಬಗ್ಗೆ ಶನಿವಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಅನುಷ್ಠಾನ ಗೊಳಿಸಲು ಬಿಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅವರು ನಗರದಲ್ಲಿ ಭಾನುವಾರ ಮಾಧ್ಯಮದವರಿಗೆ ತಿಳಿಸಿದರು. 

ಹೊರ ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಬಿಗಿ ಕ್ರಮ ಅನಿವಾರ್ಯವಾಗಿದೆ ಎಂದರು.

ಮೀಸಲಾತಿಗಾಗಿ ಪಂಚಮಸಾಲಿ ಸಮಾಜ ಹೋರಾಟ ನಡೆಸುತ್ತಿದೆ. ಕಾನೂನು ವ್ಯಾಪ್ತಿಯಲ್ಲಿ ತೀರ್ಮಾನ ಮಾಡುವುದಾಗಿ ಮುಖ್ಯಮಂತ್ರಿ ಅವರು ಹೇಳಿದ್ದಾರೆ. ಕಾನೂನು ತಜ್ಞರ ವರದಿ ಪಡೆದು ನ್ಯಾಯ ಒದಗಿಸುವ ಕೆಲಸ ಮಾಡುತ್ತಾರೆ. ಸೌಲಭ್ಯಗಳಿಂದ ವಂಚಿತ ಸಮುದಾಯಗಳಿಗೆ ನ್ಯಾಯ ದೊರಕಿಸಿ ಕೊಡುವುದು ಸರ್ಕಾರದ ಜವಾಬ್ದಾರಿ ಎಂದರು.

ಆದರೆ, ಒಂದು ಗಂಟೆಯ ಒಳಗೆ ಆದೇಶದ ಪ್ರತಿ ನೀಡುವಂತೆ ಸಮಯ ನಿಗದಿ ಮಾಡಿ ಸರ್ಕಾರಕ್ಕೆ ಒತ್ತಾಯ ಮಾಡುವುದು ಸರಿಯಲ್ಲ. ಮೀಸಲಾತಿ ಬಹಳ ಸೂಕ್ಷ್ಮ ವಿಷಯವಾಗಿದೆ. ಯಾವುದೇ ಸಮುದಾಯಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದೂ ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು