ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ: ಈ ಬಾರಿ ಬಹು ಆಯ್ಕೆ ಪ್ರಶ್ನೆ ಇಲ್ಲ

Last Updated 9 ಡಿಸೆಂಬರ್ 2021, 20:56 IST
ಅಕ್ಷರ ಗಾತ್ರ

ಬೆಂಗಳೂರು: ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ.

ಕೋವಿಡ್‌–19 ಕಾರಣಕ್ಕೆ 2021ನೇ ಸಾಲಿನ ಪರೀಕ್ಷೆಯಲ್ಲಿ ಈ ವ್ಯವಸ್ಥೆ ಜಾರಿಗೊಳಿಸಲಾಗಿತ್ತು.

’ಶಿಕ್ಷಕರು ಮತ್ತು ತಜ್ಞರ ಅಭಿಪ್ರಾಯಗಳನ್ನು ಪಡೆದು ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲಾಗಿದೆ. ವಿದ್ಯಾರ್ಥಿಗಳ ಹಿತಾಸಕ್ತಿಯಿಂದಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿವರವಾಗಿ ಉತ್ತರ ಬರೆಯುವ ಪದ್ಧತಿಯಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ’ ಎಂದು ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಪ್ರಥಮ ಭಾಷೆ ಹೊರತುಪಡಿಸಿ ಉಳಿದ ವಿಷಯಗಳಿಗೆ 100 ಅಂಕಗಳನ್ನು ನಿಗದಿಪಡಿಸಲಾಗಿದೆ. ಇದರಲ್ಲಿ 20 ಅಂಕಗಳಿಗೆ ಆಂತರಿಕ ಪರೀಕ್ಷೆ ನಡೆಸಲಾಗುತ್ತದೆ. ಪ್ರಥಮ ಭಾಷೆಗೆ ಮಾತ್ರ 125 ಅಂಕಗಳನ್ನು ನಿಗದಿಪಡಿಸಲಾಗಿದೆ.

‘ಮಕ್ಕಳಲ್ಲಿ ಬರವಣಿಗೆ ಕೌಶಲ ಮತ್ತು ಜ್ಞಾನಮಟ್ಟ ಬೆಳೆಯುವುದು ಮುಖ್ಯ. ಬಹು ಆಯ್ಕೆ ಪ್ರಶ್ನೆಗಳಿಂದ ವಿದ್ಯಾರ್ಥಿಗಳು ಬರೆಯುವುದನ್ನು ಮರೆಯುತ್ತಾರೆ. ವಿದ್ಯಾರ್ಥಿಗಳು ವಿಷಯದ ವಿಶ್ಲೇಷಣೆ ನಡೆಸಿ ಬರೆಯುವುದು ಮುಖ್ಯವಾಗಬೇಕು’ ಎಂದು ಕರ್ನಾಟಕ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಚ್‌.ಕೆ. ಮಂಜುನಾಥ್‌ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT