ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಚಿಂತನೆ ಇಲ್ಲ: ಯಡಿಯೂರಪ್ಪ

Last Updated 11 ಮೇ 2021, 10:42 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್‌ ಘೋಷಣೆ ಮಾಡಿರುವ ಕಾರಣ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಚಿಂತನೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋವಿಡ್‌ ಸ್ವಲ್ಪಮಟ್ಟಿಗೆ ನಿಯಂತ್ರಣಕ್ಕೆ ಬರುತ್ತಿದ್ದು, ಪೂರ್ಣ ಪ್ರಮಾಣದ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು. ಲಾಕ್‌ಡೌನ್‌ ಕಾರಣ ಕಾರ್ಮಿಕರು ಮತ್ತು ಬಡವರಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿದ್ದವು.

ದೇಶದಲ್ಲಿ ಈಗ ಕರ್ನಾಟಕದ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚು ಇದ್ದರೂ, ನಿಯಂತ್ರಣಕ್ಕೆ ಬರುತ್ತಿದೆ. ಕೇಂದ್ರ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತಿದೆ. ಪ್ರಧಾನಿಯವರೇ ನನ್ನೊಂದಿಗೆ ಮಾತನಾಡಿ, ರಾಜ್ಯದ ಅಗತ್ಯತೆಯನ್ನು ವಿಚಾರಿಸಿದರು. ಇವತ್ತು ಜೆಮ್‌ಶೆಡ್‌ಪುರದಿಂದ ಆಮ್ಲಜನಕ ಬಂದಿದೆ ಎಂದರು.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಅವರ ಭೇಟಿಯಲ್ಲಿ ಯಾವುದೇ ವಿಶೇಷವಿಲ್ಲ. ಕೋವಿಡ್‌ ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರದಿಂದ ಅಗತ್ಯವಿರುವ ನೆರವು ನೀಡಲಾಗುವುದು. ರಾಜ್ಯದ ಕೋವಿಡ್‌ ಪರಿಸ್ಥಿತಿಯ ಕುರಿತು ಮಾಹಿತಿಯನ್ನು ಪಡೆದರು ಎಂದು ಯಡಿಯೂರಪ್ಪ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT