ಶನಿವಾರ, ಜುಲೈ 31, 2021
21 °C

ರಾಜೀನಾಮೆ ನೀಡುವ‌ ಪ್ರಶ್ನೆಯೇ ಇಲ್ಲ: ಬಿಎಸ್‌ ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DH Photo

ನವದೆಹಲಿ: 'ನಾನು ರಾಜೀನಾಮೆ ನೀಡಲಿದ್ದೇನೆ ಎಂಬ‌ ಸುದ್ದಿಯಲ್ಲಿ ಸತ್ಯಾಂಶ ಇಲ್ಲ. ರಾಜೀನಾಮೆ ನೀಡುವುದೂ ಇಲ್ಲ' ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಶನಿವಾರ ಬೆಳಿಗ್ಗೆ ಬಿಜೆಪಿ ರಾಷ್ಟ್ರೀಯ ‌ಅಧ್ಯಕ್ಷ‌ ಜೆ.ಪಿ.‌ನಡ್ಡಾ ಅವರ ಭೇಟಿಗೆ ತೆರಳಿದ ಸಂದರ್ಭ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

'ನಾನು ಪ್ರಧಾನಿ ಜೊತೆ‌ ರಾಜ್ಯದ ಅಭಿವೃದ್ಧಿ ಹಾಗೂ ಮೇಕೆದಾಟು ಯೋಜನೆ ಬಗ್ಗೆ ಮಾತುಕತೆ‌ ನಡೆಸಿದ್ದೇನೆ. ಪಕ್ಷದ ವರಿಷ್ಠರಾದ ಅಮಿತ್ ಶಾ, ನಡ್ಡಾ, ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದೇನೆ' ಎಂದು ಅವರು ಹೇಳಿದರು.

'ಆಗಸ್ಟ್ ಮೊದಲ ವಾರ ಮತ್ತೆ ದೆಹಲಿಗೆ ಬಂದು ವರಿಷ್ಠರನ್ನು ಭೇಟಿ ಮಾಡುವೆ' ಎಂದು ಅವರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು