ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಗಳಲ್ಲಿ ಸಾತ್ವಿಕ ಆಹಾರ– ಚಿಂತನೆ ಇಲ್ಲ: ನಾಗೇಶ್‌

Last Updated 14 ಫೆಬ್ರುವರಿ 2023, 4:37 IST
ಅಕ್ಷರ ಗಾತ್ರ

ಬೆಂಗಳೂರು: ‘ಶಾಲೆಗಳಲ್ಲಿ ಸಾತ್ವಿಕ ಆಹಾರ ನೀಡುವ ಚಿಂತನೆ ನಡೆಸಿಲ್ಲ. ಆದರೆ, ನೈತಿಕ ಶಿಕ್ಷಣ ಜಾರಿಗೆ ತರಲು ಉದ್ದೇಶಿಸಲಾಗಿದೆ. ನೈತಿಕ ಶಿಕ್ಷಣ ಮತ್ತು ಸಾತ್ವಿಕ ಆಹಾರವನ್ನು ಒಂದೇ ದೃಷ್ಟಿಯಿಂದ ನೋಡುವುದು ಸರಿಯಲ್ಲ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಅವರು ಹೇಳಿದರು.

ವಿಧಾನ ಪರಿಷತ್‌ನಲ್ಲಿ ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಅವರು, ‘ಶಾಲಾ ಹಂತದಲ್ಲಿ ನೈತಿಕ ಶಿಕ್ಷಣ ಅಳವಡಿಸುವ ಕುರಿತು ಇತ್ತೀಚೆಗೆ ಸರ್ವ ಧರ್ಮಗಳ ಚಿಂತಕರ ದುಂಡು ಮೇಜಿನ ಸಭೆ ನಡೆಸಲಾಗಿತ್ತು. ಅಲ್ಲಿ ಕೆಲವರು ಸಾತ್ವಿಕ ಆಹಾರ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಭಿಪ್ರಾಯ ವ್ಯಕ್ತ‌ಪಡಿಸುವುದು ಅವರ ಸ್ವಾತಂತ್ರ್ಯ. ಇದೇ ರೀತಿ ಅಭಿಪ್ರಾಯ ಹೇಳಿ ಎಂದು ಸರ್ಕಾರ ಸೂಚಿಸಲು ಸಾಧ್ಯವಿಲ್ಲ. ಶಾಲಾ ಹಂತದಲ್ಲಿ ನೈತಿಕ ಶಿಕ್ಷಣ ನೀಡಬೇಕು ಎಂದು ಎಲ್ಲರೂ ಸಲಹೆ ನೀಡಿದ್ದಾರೆ’ ಎಂದರು.

ಅದಕ್ಕೆ ಧ್ವನಿಗೂಡಿಸಿದ ಸಭಾಪತಿ ಬಸವರಾಜ ಹೊರಟ್ಟಿ, ‘ಶಾಲೆಗಳಲ್ಲಿ ನೈತಿಕ ಶಿಕ್ಷಣ ಬೋಧಿಸುವ ಅಗತ್ಯ ಇದೆ’ ಎಂದು ಪ್ರತಿಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT