ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಭದ್ರತೆಯಲ್ಲಿ ಲೋಪ ಆಗಿಲ್ಲ: ವಿಡಿಯೊ ಸಹಿತ ಅಲೋಕ್ ಕುಮಾರ್ ಟ್ವೀಟ್

Last Updated 25 ಮಾರ್ಚ್ 2023, 17:03 IST
ಅಕ್ಷರ ಗಾತ್ರ

ಬೆಂಗಳೂರು: ಕೆಲ ಮಾಧ್ಯಮಗಳು ವರದಿ ಮಾಡಿರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ದಾವಣಗೆರೆಯಲ್ಲಿ ಶನಿವಾರ ನಡೆಸಿದ ರೋಡ್ ಶೋ ವೇಳೆ ಭದ್ರತಾಲೋಪ ಆಗಿಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ವಾಹನದ ಕಡೆಗೆ ನುಗ್ಗಿದ ವ್ಯಕ್ತಿಯನ್ನು ನಾನು ಮತ್ತು ಎಸ್‌ಪಿಜಿ ಪಡೆ ಖುದ್ದು ವಶಕ್ಕೆ ಪಡೆದಿದ್ದೇವೆ. ಅದೊಂದು ವಿಫಲ ಯತ್ನವಾಗಿತ್ತು. ಮೋದಿಯವರ ವಾಹನದಿಂದ ಬಹಳ ದೂರದಲ್ಲೇ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ವ್ಯಕ್ತಿ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಈ ಕುರಿತಾದ ವಿಡಿಯೊವನ್ನೂ ಅವರು ಹಂಚಿಕೊಂಡಿದ್ದಾರೆ.

ದಾವಣಗೆರೆಯಲ್ಲಿ ಮೋದಿ ಅವರು ತೆರಳುತ್ತಿದ್ದ ವಾಹನದತ್ತ ವ್ಯಕ್ತಿಯೊಬ್ಬ ನುಗ್ಗಲು ಯತ್ನಿಸಿದ್ದ.

ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ ಮಹಾಸಂಗಮದಲ್ಲಿ ಭಾಗವಹಿಸಲು ಮೋದಿ ಅವರು ಇಂದು ರಾಜ್ಯಕ್ಕೆ ಆಗಮಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT