ಭಾನುವಾರ, ಏಪ್ರಿಲ್ 11, 2021
27 °C

ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ಜಾತ್ರೆ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಾಯಕನಹಟ್ಟಿ: ಚಿತ್ರದುರ್ಗ ಜಿಲ್ಲೆಯ ಇತಿಹಾಸ ಪ್ರಸಿದ್ಧ ಗುರುತಿಪ್ಪೇರುದ್ರಸ್ವಾಮಿ ವಾರ್ಷಿಕ ಜಾತ್ರೆಯನ್ನು ರದ್ದುಪಡಿಸಲಾಗಿದೆ. ಸಾಂಪ್ರದಾಯಿಕ ಆಚರಣೆಗೆ ಜಾತ್ರೆ ಸೀಮಿತವಾಗಲಿದ್ದು, ಚಳ್ಳಕೆರೆ ತಾಲ್ಲೂಕು ಹೊರತುಪಡಿಸಿ ಉಳಿದೆಡೆಯ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಪಟ್ಟಣದ ತಿಪ್ಪೇರುದ್ರಸ್ವಾಮಿ ದೇವಾಲಯದ ಸಭಾಂಗಣದಲ್ಲಿ ಗುರುವಾರ ನಡೆದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಈ ನಿರ್ಧಾರ ಪ್ರಕಟಿಸಿದರು. ದೊಡ್ಡ ರಥೋತ್ಸವ ಮಾರ್ಚ್‌ 29ಕ್ಕೆ ನಿಗದಿಯಾಗಿತ್ತು.

‘ಎರಡನೇ ಹಂತದಲ್ಲಿ ಕೊರೊನಾ ಸೋಂಕು ಹರಡುತ್ತಿರುವುದರಿಂದ ದೊಡ್ಡ ರಥೋತ್ಸವ ಸೇರಿದಂತೆ ಜಾತ್ರೆಯನ್ನು ರದ್ದು ಮಾಡಲಾಗಿದೆ. ಆದರೆ, ಜಾತ್ರೆಯ ದಿನದಂದು ದೇವಾಲಯದಲ್ಲಿ ಎಲ್ಲ ಪೂಜಾ ವಿಧಿವಿಧಾನ, ಪೂಜಾ ಕೈಂಕರ್ಯಗಳು ನಡೆಯಲಿವೆ. ಜಾತ್ರೆಯ ದಿನ ಹೊರರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸುವ ಭಕ್ತರಿಗೆ ನಾಯಕನಹಟ್ಟಿ ಪಟ್ಟಣಕ್ಕೆ ಪ್ರವೇಶ ಇರುವುದಿಲ್ಲ’ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

‘ಜಾತ್ರೆಯಲ್ಲಿ ವಸ್ತುಪ್ರದರ್ಶನ ಹಾಗೂ ಅಂಗಡಿ ತೆರೆಯಲು ಅವಕಾಶವಿಲ್ಲ. ವಿಶೇಷ ಸಾರಿಗೆ ಸೌಲಭ್ಯದ ವ್ಯವಸ್ಥೆ ಕಲ್ಪಿಸುವುದಿಲ್ಲ. ಇದಕ್ಕೆ ಭಕ್ತರು ಸಹಕರಿಸಬೇಕು. ಮನೆಗಳಲ್ಲಿ ಸುರಕ್ಷಿತವಾಗಿದ್ದು, ದೇವರ ಆರಾಧನೆ ಮಾಡಬೇಕು’ ಎಂದು ಮನವಿ ಮಾಡಿದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು