ಶನಿವಾರ, ಜುಲೈ 2, 2022
26 °C

ಪಾದಯಾತ್ರೆಗೆ ಹರಿದುಬಂದ ಜನಸಾಗರ: ಮೈಸೂರು ರಸ್ತೆಯುದ್ದಕ್ಕೂ ಸಂಚಾರ ದಟ್ಟಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಮಂಗಳವಾರ ಜನಸಾಗರವೇ ಹರಿದುಬಂದಿದೆ. ಸಾವಿರಾರು ಜನರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿರುವುದರಿಂದ ಮೈಸೂರು ರಸ್ತೆಯುದ್ದಕ್ಕೂ ಸಂಚಾರ ದಟ್ಟಣೆ ಸೃಷ್ಟಿಯಾಗಿದೆ.

ಬೆಂಗಳೂರಿನ ಹಲವು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಬಂದಿರುವ ಜನರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಕಿಲೋಮೀಟರ್ ಗಟ್ಟಲೆ ಜನದಟ್ಟಣೆ ಕಂಡುಬರುತ್ತಿದೆ.

ಮೈಸೂರು ರಸ್ತೆಯ ಒಂದು ಭಾಗದಲ್ಲಿ ಪಾದಯಾತ್ರೆ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನೊಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕೆಲವು ಜಂಕ್ಷನ್‌ಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.

ನೀರು, ಕಬ್ಬಿನ ಹಾಲು: ಪಾದಯಾತ್ರೆ ಸಂಚರಿಸುವ ಮಾರ್ಗದಲ್ಲಿ ಅಲ್ಲಲ್ಲಿ ಅರವಟಿಗೆಗಳನ್ನು ಸ್ಥಾಪಿಸಲಾಗಿದೆ.‌ ಕುಡಿಯುವ‌ ನೀರು ಮತ್ತು ಕಬ್ಬಿನ ಹಾಲು ವಿತರಿಸಲಾಗುತ್ತಿದೆ.

ಕಬ್ಬಿನ ಹಾಲು ವಿತರಣೆಗಾಗಿ ಲಾರಿಗಳಲ್ಲಿ ಕಬ್ಬಿನ ಜಲ್ಲೆಗಳನ್ನು ತರಲಾಗಿದೆ.

ಜೆಸಿಬಿ ಬಳಸಿ ಹೂಮಳೆ: ಮೈಸೂರು ರಸ್ತೆಯಲ್ಲಿ ಪಾದಯಾತ್ರೆ ಹಾದು ಬರುವಾಗ ಜೆಸಿಬಿಗಳನ್ನು ಬಳಸಿ ಹೂಮಳೆಗರೆಯಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು