ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಬೆಂಗಳೂರು, ಕೋಲಾರ, ಮೈಸೂರು, ರಾಮನಗರ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಉಷ್ಣಾಂಶವು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಕಲುಬುರಗಿಯಲ್ಲಿ ಭಾನುವಾರ ಗರಿಷ್ಠ ಉಷ್ಣಾಂಶ 38.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು ಎಂದು ಐಎಂಡಿ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.