ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡುಗು ಸಹಿತ ಮಳೆ: ಇಂದು 9 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’

Last Updated 24 ಮಾರ್ಚ್ 2023, 20:32 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿವಿಧೆಡೆ ಶನಿವಾರ ಗುಡುಗು ಸಹಿತ ಮಳೆಯಾಗಲಿದ್ದು, ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ಬೀದರ್, ಕಲಬುರಗಿ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಭಾನುವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಒಳನಾಡಿನ ಉಳಿದೆಡೆ ಒಣಹವೆ ಇರುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

ಗರಿಷ್ಠ ಉಷ್ಣಾಂಶವು ಕರಾವಳಿಯ ಒಂದೆರಡು ಕಡೆ ಸಾಮಾನ್ಯಕ್ಕಿಂತ 2–3 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಒಳನಾಡಿನ ಒಂದೆರಡು ಕಡೆ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆ ಸಾಮಾನ್ಯಕ್ಕಿಂತ 3–4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಶುಕ್ರವಾರ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ (36.6 ಡಿಗ್ರಿ ಸೆಲ್ಸಿಯಸ್) ಹಾಗೂ ಬಾಗಲಕೋಟೆಯಲ್ಲಿ ಕನಿಷ್ಠ ಉಷ್ಣಾಂಶ (14.6 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT