ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು: ಹುಲಿ ದಾಳಿಗೆ ಕಾರ್ಮಿಕ ಬಲಿ

ಅರಣ್ಯ ಇಲಾಖೆ ವಿರುದ್ಧ ರೈತರು, ಕಾರ್ಮಿಕರ ಪ್ರತಿಭಟನೆ
Last Updated 28 ಮಾರ್ಚ್ 2022, 16:33 IST
ಅಕ್ಷರ ಗಾತ್ರ


ವಿರಾಜಪೇಟೆ (ಕೊಡಗು): ತಾಲ್ಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರುದ್ರಗುಪ್ಪೆ ಗ್ರಾಮದ ಕಾಫಿ ತೋಟವೊಂದರಲ್ಲಿ ಹುಲಿ ದಾಳಿ ನಡೆಸಿದ್ದು ಕಾರ್ಮಿಕ ಗಣೇಶ್ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಯ್ಯಪ್ಪ ಅವರ ತೋಟದಲ್ಲಿ ಗಣೇಶ್‌ ಸೇರಿದಂತೆ ಇಬ್ಬರು ಕಾರ್ಮಿಕರು ಸೋಮವಾರ ಕಾಳು ಮೆಣಸು ಕೊಯ್ಲು ಮಾಡುತ್ತಿದ್ದರು. ನೆಲದಲ್ಲಿ ಬಿದ್ದಿದ್ದ ಕಾಳು ಮೆಣಸು ಹೆಕ್ಕುವಾಗ ಹುಲಿ ದಾಳಿ ನಡೆಸಿದೆ. ಮತ್ತೊಬ್ಬ ಕಾರ್ಮಿಕ ಮರವನ್ನೇರಿ ಕಾಳುಮೆಣಸು ಕೊಯ್ಲು ಮಾಡುತ್ತಿದ್ದರ ಪರಿಣಾಮ ಅಪಾಯದಿಂದ ಪಾರಾಗಿದ್ದಾರೆ. ಬಳಿಕ ಹುಲಿ ಅಲ್ಲಿಂದ ಕಾಲ್ಕಿತ್ತಿದೆ ಎಂದು ಸ್ಥಳೀಯರು ತಿಳಿಸಿದರು.

ಎರಡು ದಿನಗಳ ಹಿಂದೆ ಗ್ರಾಮದ ಬೋಪಣ್ಣ ಅವರಿಗೆ ಸೇರಿದ ಹಸುವಿನ ಮೇಲೆ ಇದೇ ಹುಲಿ ನಡೆಸಿತ್ತು ಎಂದು ಗ್ರಾಮಸ್ಥರು ಮಾಹಿತಿ ನೀಡಿದರು.

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕು. ಮೃತದೇಹವನ್ನು ಕೊಂಡೊಯ್ಯಲು ಬಿಡುವುದಿಲ್ಲ. ಜಿಲ್ಲೆಯಲ್ಲಿ ವನ್ಯಜೀವಿ ಹಾವಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಕ್ರಮ ಕೈಗೊಂಡಿಲ್ಲ ಎಂದು ರೈತರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.

‘ಗ್ರಾಮದಲ್ಲಿ ಹುಲಿ ಸುಳಿದಾಡುತ್ತಿರುವ ಮಾಹಿತಿಯನ್ನು ಅರಣ್ಯ ಇಲಾಖೆಗೆ ನೀಡಲಾಗಿತ್ತು. ಆದರೆ, ಸೆರೆ ಹಿಡಿಯುವ ಕಾರ್ಯಾಚರಣೆ ವಿಳಂಬ ಮಾಡಲಾಗಿದೆ. ಈಗ ಹುಲಿ ಮನುಷ್ಯರ ಮೇಲೂ ದಾಳಿ ನಡೆಸಿ ಹುಲಿ ಅಪಾಯಕಾರಿ ಎನಿಸಿದೆ. ಕಾರ್ಮಿಕರು ಕೆಲಸಕ್ಕೆ ಬರಲು ಭಯ ಪಡುತ್ತಿದ್ದಾರೆ’ ಎಂದು ಗ್ರಾಮದ ಲೋಕನಾಥ್ ಆತಂಕ ವ್ಯಕ್ತಪಡಿಸಿದರು.

ಸ್ಥಳಕ್ಕೆ ಡಿವೈಎಸ್‌ಪಿ ಜಯಕುಮಾರ್, ಸಿಪಿಐ ಶ್ರೀಧರ್, ಗ್ರಾಮಾಂತರ ಠಾಣೆಯ ಪಿಎಸ್ಐ ಸಿದ್ದಲಿಂಗ ಬಿ ಬಾಣಸೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT