ವಿನಯ ಹುಟ್ಟುಹಬ್ಬ ಇಂದು: ಬಿಗಿ ಭದ್ರತೆ
ಬೆಳಗಾವಿ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಇಲ್ಲಿನ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಗುರುವಾರ ರಾತ್ರಿ ಊಟ, ನಿದ್ರೆ ಮಾಡಲಿಲ್ಲ ಎಂದು ಮೂಲಗಳು ತಿಳಿಸಿವೆ.
ಕೋವಿಡ್–19 ಕಾರಣದಿಂದಾಗಿ ಅವರನ್ನು ಪ್ರತ್ಯೇಕವಾಗಿರಿಸಲಾಗಿದೆ. ಸಾಮಾನ್ಯ ಕೈದಿಯಂತೆ ರಾತ್ರಿ ಕಳೆದಿದ್ದಾರೆ. ಶುಕ್ರವಾರ ಅವರನ್ನು ಸಿಬಿಐ ನ್ಯಾಯಾಲಯವು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಒಳಪಡಿಸಿತು.
ಶನಿವಾರ (ನ.7) ವಿನಯ ಅವರ 55ನೇ ಹುಟ್ಟುಹಬ್ಬವಿದ್ದು, ಅಭಿಮಾನಿಗಳು ಸೇರುವ ಸಾಧ್ಯತೆ ಇರುವುದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಹಿಂಡಲಗಾ ಜೈಲಿನ ಆವರಣದಲ್ಲಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.