ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್ ಅನುಷ್ಠಾನಕ್ಕೆ ಎಲ್ಲ ಇಲಾಖೆಗಳಿಗೂ ವೇಳಾಪಟ್ಟಿ: ಸಿಎಂ ಬೊಮ್ಮಾಯಿ

Last Updated 4 ಮೇ 2022, 6:43 IST
ಅಕ್ಷರ ಗಾತ್ರ

ಬೆಂಗಳೂರು: ಬಜೆಟ್ ಅನುಷ್ಠಾನಕ್ಕೆ ಎಲ್ಲ ಇಲಾಖೆಗಳಿಗೂ ವೇಳಾಪಟ್ಟಿ ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪ್ರಸಕ್ತ ಸಾಲಿನ ಬಜೆಟ್ ಅನುಷ್ಠಾನಕ್ಕೆ ವೇಗ ನೀಡುವುದಕ್ಕಾಗಿ ಬುಧವಾರ ಇಲಾಖಾವಾರು ಸಭೆಗಳನ್ನು ಆರಂಭಿಸುವ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಬಜೆಟ್ ಘೋಷಣೆಗಳ ಅನುಷ್ಠಾನಕ್ಕಾಗಿ ಈಗಾಗಲೇ ಶೇಕಡ 80ರಷ್ಟು ಆದೇಶಗಳನ್ನು ಹೊರಡಿಸಲಾಗಿದೆ. ಉಳಿದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತ್ವರಿತವಾಗಿ ಆದೇಶ ಹೊರಡಿಸಲಾಗುವುದು' ಎಂದರು.

ಎಲ್ಲ ಇಲಾಖೆಗಳಿಗೂ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ವೇಳಾಪಟ್ಟಿ ನೀಡಲಾಗುವುದು. ಅದೇ ಪ್ರಕಾರ ಕೆಲಸ ಮಾಡುವಂತೆ ಗುರಿ ನಿಗದಿಪಡಿಸಲಾಗುವುದು. ಕಾಲಕಾಲಕ್ಕೆ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ಬಜೆಟ್ ಅನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಕ್ಕೆ ತರುವ ಸಂಬಂಧ ಮುಂದಿನ ವಾರ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದರು.

ಶೇ 30ರಷ್ಟು ಮಂದಿ ಅಕ್ರಮದಲ್ಲಿ ಭಾಗಿ ಆಗಿರಬಹುದು. ಆದರೆ ಇನ್ನುಳಿದವರು ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿದ್ದಾರೆ ಎಂದು ಹೇಳಿದರು.

ಇವುಗಳನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT